ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.15- ಮೆದುಳು ಸೂಕ್ಷ್ಮ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಮುಂದುವರಿದಿದೆ.

ಕೋಮಾ (ತೀವ್ರ ಪ್ರಜ್ಞಾಶೂನ್ಯ ಸ್ಥಿತಿ)ದಲ್ಲಿರುವ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೆದುಳಿನ ಸೂಕ್ಷ್ಮ ನರದಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಮುಖರ್ಜಿ ಅವರನ್ನು ಆಗಸ್ಟ್ 10ರಂದು ದೆಹಲಿಯ ಆರ್ಮಿಸ್ ರಿಸರ್ಚ್ ಅಂಡ್ ರೆಫರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ಸೋಂಕು ಸಹ ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರ ಮೆದುಳಿನಲ್ಲಿ ಹೆಪ್ಪುಗಟ್ಟದ್ದ ರಕ್ತವನ್ನು ತೆಗೆದುಹಾಕಲು ಸೂಕ್ಷ್ಮ ಶಸ್ತ್ರಚಿಕಿತ್ಸೆ ಒಳಪಡಿಸಲಾಯಿತು.

ಅವರ ಆರೋಗ್ಯ ದಿನೇ ದಿನೇ ಗಂಭೀರ ಹಂತ ತಲುಪಿತ್ತು. ವೆಂಟಿಲೇಟರ್ (ಕೃತಕ ಉಸಿರಾಟ) ವ್ಯವಸ್ಥೆಯಲ್ಲಿರುವ ಅವರು ಕೋಮಾ ಹಂತ ತಲುಪಿದ್ಧಾರೆ. ವೆಂಟಿಲೇಟರ್ ಆಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ತಿಳಿಸಿದ್ದಾರೆ.

Facebook Comments

Sri Raghav

Admin