ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್, ಕನ್ನಡಿಗ ಪ್ರಸಿದ್ಧ್‍ ಕೃಷ್ಣಗೆ ಚಾನ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ಪುಣೆ, ಮಾ. 23- ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಯಾನ್ ಮಾರ್ಗನ್ ನಾಯಕತ್ವದ ಇಂಗ್ಲೆಂಡ್ ವಿರಾಟ್ ಪಡೆಯನ್ನು ಬ್ಯಾಟಿಂಗ್‍ಗೆ ಆಮಂತ್ರಿಸಿದೆ. ನಿರೀಕ್ಷೆಯಂತೆ ಕನ್ನಡಿಗ ಪ್ರಸಿದ್ಧ್‍ಕೃಷ್ಣ ಅವರು ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದಾರೆ.

ದೇಶಿಯ ಕ್ರಿಕೆಟ್‍ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಪ್ರಸಿದ್ಧ್ ಕೃಷ್ಣ ಅವರು ಸ್ಥಾನ ಪಡೆದಿದ್ದರಿಂದ ಯುವ ವೇಗಿಗಳಾದ ಟಿ.ನಟರಾಜನ್ ಹಾಗೂ ಮೊಹಮ್ಮದ್ ಸಿರಾಜ್ ತಂಡದಿಂದ ಹೊರಗುಳಿದಿದ್ದಾರೆ. ಯುವ ಆಟಗಾರ ಕೃನಾಲ್ ಪಾಂಡ್ಯ ಕೂಡ ಅಂತರರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾರ್ದಾಪಣೆ ಮಾಡಿದ್ದರೆ, ಟ್ವೆಂಟಿ-20 ಕ್ರಿಕೆಟ್‍ನಲ್ಲಿ ಕಳಪೆ ಪ್ರದರ್ಶನ ತೋರಿದ್ದರೂ ಕೆ.ಎಲ್.ರಾಹುಲ್‍ಗೆ ಅವಕಾಶ ಕಲ್ಪಿಸಲಾಗಿದೆ.

Facebook Comments