ಶಿವಸೇನೆ ಶಾಸಕನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.24- ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧ ಅಕ್ರಮ ವಗಾರ್ವಣೆ ನಿರ್ಬಂಧಕ ಕಾಯ್ದೆಯನ್ವಯ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಸರ್ನಾಯಕ್ ಅವರಿಗೆ ಸೇರಿದ ಕಟ್ಟಡಗಳು , ವಾಣಿಜ್ಯ ಉದ್ಯಮಗಳು, ಬಿಲ್ಡರ್‍ಗಳು, ಅವರೊಂದಿಗೆ ಸಂಪರ್ಕವಿರಿಸಿಕೊಂಡಿರುವ ಪ್ರಮುಖರು ಹಾಗೂ ಕೆಲ ರಾಜಕೀಯ ಮುಖಂಡರುಗಳ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಓವಾಲಾ-ಮೈಜ್ವಾಡ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಸುವ ಶಿವಸೇನೆ ಶಾಸಕ ಸರ್ನಾಯಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

Facebook Comments