ಅಪಘಾತಕ್ಕೊಳಗಾಗಿದ್ದು ನನ್ನ ಕಾರಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ: ಮೈಸೂರು ಸಂಸದ ಪ್ರತಾಪ್ ಸಿಂಹ ಕಾರು ಅಪಘಾತವಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಸ್ಪಷ್ಟನೆ ನೀಡಿರುವ ಸಂಸದ ಪ್ರತಾಪ್ ಸಿಂಹ ನನ್ನ ಕಾರು ಅಪಘಾತಕ್ಕೊಳಗಾಗಿಲ್ಲ, ನನಗೆ ಆಗಲಿ ಅಥವಾ ನನ್ನ ಕುಟುಂಬದವರಿಗೆ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ ಎಂಬ ಕೆಲ ಮಾಧ್ಯಮಗಳಲ್ಲಿ ಸುದ್ದಿ ಕೇಳಿ ಎಲ್ಲರೂ ಗಾಬರಿಯಾಗಿದ್ದರು. ಹೆದ್ದಾರಿಯಲ್ಲಿ ಅಪಘಾತವಾಗಿದ್ದು ನಿಜ, ಆದರೆ, ಆ ಕಾರಿನಲ್ಲಿ ಪ್ರತಾಪ್ ಸಿಂಹ ಅವರಾಗಲಿ ಅವರ ಕುಟುಂಬದವರಾಗಲಿ ಇರಲಿಲ್ಲ ಎಂದು ಇದೀಗ ಖಚಿತವಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ವಾಹನ ಪಲ್ಟಿಯಾಗಿದೆ. ಪಲ್ಟಿಯಾಗಿರುವ ವಾಹನದ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರತಾಪ್ ಸಿಂಹ ಅವರ ಬಗ್ಗೆ ಆತಂಕ ವ್ಯಕ್ತಪಡಿಸಿ ಅನೇಕರು ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಆತಂಕ ನಿವಾರಣೆಯಾಗಿದ್ದು, ಘಟನೆ ಬಗ್ಗೆ ಪ್ರತಾಪ್ ಸಿಂಹ ಅವರೇ ವಿವರರಿಸಿದ್ದಾರೆ.

ಪ್ರತಾಪ್ ಸಿಂಹ ಅವರು ಫೇಸ್ ಬುಕ್ ಲೈವ್ ಬಂದು ಘಟನೆ ಬಗ್ಗೆ ವಿವರಿಸಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದೆ ಮಾರ್ಗ ಮಧ್ಯದಲ್ಲಿ ವೈಶಾಲಿ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ಸಮಯದಲ್ಲಿ ಹೋಟೆಲ್ ಮುಂದೆ ಇರುವ ಹೆದ್ದಾರಿಯಲ್ಲಿ‌ ಕಾರು ಪಲ್ಟಿಯಾಗಿದ್ದು ಕಂಡು ಬಂದಿತು. ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿನ ಚಕ್ರ ಸ್ಫೋಟಗೊಂಡು ಪಲ್ಟಿಯಾಗಿತ್ತು.

ಕಾರಿನಲ್ಲಿ ಗಂಡ, ಹೆಂಡತಿ, ಮಗಳು, ಚಾಲಕ ಸೇರಿ 6 ಜನರಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅತೀ ವೇಗವಾಗಿ ಬಂದ ಫಾರ್ಚೂನರ್ ಕಾರು ಪಲ್ಟಿ ಹೊಡೆದಿದೆ. ಹಾಗೂ ಕಾರು ಚಾಲಕನಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ನೋವು, ಗಾಯಗಳಾಗಿಲ್ಲ, ನಾನು ನನ್ನ ಗನ್ ಮ್ಯಾನ್ ತಕ್ಷಣವೆ ನೆರವಿಗೆ ಧಾವಿಸಿದೆವು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬಂದು ನೆರವಾದರು ಎಂದು ತಿಳಿಸಿದ್ದಾರೆ.

Facebook Comments

Sri Raghav

Admin