ಬ್ರೇಕಿಂಗ್ : ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳವಣಿಗೆಯಲ್ಲಿ ರಾಜ್ಯದ ನೂತನ ಡಿಜಿ-ಐಜಿಪಿಯಾಗಿ ಸಿಐಡಿ ವಿಭಾಗದ ಮುಖ್ಯಸ್ಥ ಪ್ರವೀಣ್ ಸೂದ್​ ಅವರು ನೇಮಕವಾಗಿದ್ದಾರೆ. ನೀಲಮಣಿ ರಾಜು ಅವರು ಪೊಲೀಸ್ ಮಹಾನಿರ್ದೇಶಕ ಹುದ್ದೆಯಿಂದ ನಿವೃತ್ತಿಯಾದ ಹಿನ್ನಲೆಯಲ್ಲಿ ತೆರವಾದ ಈ ಸ್ಥಾನಕ್ಕೆ ಪ್ರವೀಣ್ ಸೂದ್ ಹಾಗೂ ಆಂತಾರೀಕ ಭದ್ರತಾ ವಿಭಾಗದ ಡಿಜಿಪಿ ಎಎಂ ಪ್ರಸಾದ್​ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು.

ಡಿಜಿ ಸ್ಥಾನಕ್ಕೆ ಎ.ಎಂ.ಪ್ರಸಾದ್ ಹಾಗೂ ಪ್ರವೀಣ್ ಸೂದ್ ಅವರ ನಡುವೆ ಭಾರೀ ಪೈಪೋಟಿ ನಡೆದಿತ್ತು. ಹಿರಿತನದ ಆಧಾರದಲ್ಲಿ ಎ.ಎಂ.ಪ್ರಸಾದ್ ಅವರೇ ಡಿಜಿ ಹುದ್ದೆಗೆ ಆಯ್ಕೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂತಿಮವಾಗಿ ರಾಜ್ಯ ಸರ್ಕಾರ ಪ್ರವೀಣ್ ಸೂದ್ ಅವರಿಗೆ ಮಣೆ ಹಾಕಿದೆ. ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ಪ್ರವೀಣ್ ಸೂದ್ ಅವರು ಡಿಜಿ-ಐಜಿ ಆಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಜಿ-ಐಜಿ ನೀಲಮಣಿ ಎನ್ ರಾಜು ಅವರು ಅಧಿಕಾರ ಹಸ್ತಾಂತರಿಸಿದರು.

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿರುವ ಡಿಜಿ ಕಚೇರಿಗೆ ಆಗಮಿಸಿದ ಪ್ರವೀಣ್ ಸೂದ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹಾಗೂ ಎಡಿಜಿಪಿ ಆಲೋಕ್ ಕುಮಾರ್ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಪ್ರವೀಣ್ ಸೂದ್ ಶಿಷ್ಟಚಾರದಂತೆ ಸ್ವೀಕಾರ ಮಾಡಿದರು.

1986ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರಿಗೆ ನಾಲ್ಕು ವರ್ಷಗಳ ಸೇವಾ ಅವಧಿ ಇದೆ. ಪ್ರವೀಣ್ ಸೂದ್ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದಾರೆ. ಹಿಮಾಚಲ ಪ್ರದೇಶ ಮೂಲದವರಾದ ಸೂದ್ ಅವರು, ಬಿ. ಟೆಕ್ ಹಾಗೂ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1989 ಮೈಸೂರು ಎಎಸ್‌ಪಿಯಾಗಿ ವೃತ್ತಿ ಆರಂಭಿಸಿದ್ದ ಅವರು, ಬಳ್ಳಾರಿ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

1999 ರಲ್ಲಿ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಮೂರು ವರ್ಷ ಸೇವೆ ಸಲ್ಲಿಸಿದ ಪ್ರವೀಣ್ ಸೂದ್ ಅವರಿಗೆ 1996 ರಲ್ಲಿ ಮುಖ್ಯಮಂತ್ರಿಗಳ ಪದಕ, 2002ರಲ್ಲಿ ಪೊಲೀಸ್ ಪದಕ, 2004-07 ರಲ್ಲಿ ಮೈಸೂರು ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.

2008ರಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಇವರಿಗೆ 2011 ರಲ್ಲಿ ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದರು. 2013-14 ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಮ್ಯಾನೆಜಿಂಗ್ ಡೈರೆಕ್ಟರ್, 2017 ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಕಮೀಷನರ್ ಆಗಿ ಹಲವು ಸುಧಾರಣೆ ತಂದಿದ್ದ ಪ್ರವೀಣ್ ಸೂದ್ ಬೆಂಗಳೂರು ನಾಗರೀಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದ್ದರು. ನಮ್ಮ 100, ಪಿಂಕ್ ಹೊಯ್ಸಳ, ಸುರಕ್ಷಾ ಅಪ್ಲಿಕೇಶನ್ ಇವರು ಆಯುಕ್ತರಾಗಿದ್ದಾಗ ಜಾರಿಯಾಗಿತ್ತು.

ಡಿಜಿ- ಐಜಿಪಿ ಹುದ್ದೆಗೆ ಸೇವಾ ಹಿರಿತನ ಹೊಂದಿರುವ ಈ ಮೂವರು ಹಿರಿಯ ಅಧಿಕಾರಿಗಳ ಹೆಸರುಗಳನ್ನು ರಾಜ್ಯ ಸರ್ಕಾರ ಕೇಂದ್ರ ಲೋಕಸೇವಾ ಆಯೋಗಕ್ಕೆ ಕಳಿಸಿಕೊಟ್ಟಿತ್ತು. ಈಗ ಕೇಂದ್ರ ಲೋಕಸೇವಾ ಆಯೋಗವು ಲಕೋಟೆ ಮೂಲಕ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಹೆಸರುಗಳನ್ನು ಆಯ್ಕೆ ಮಾಡಿ ಕಳಿಸಿಕೊಟ್ಟಿತ್ತು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಕೇಂದ್ರ ಲೋಕಸೇವಾ ಆಯೋಗಕ್ಕೆ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಸಂಭಾವ್ಯರ ಹೆಸರುಗಳನ್ನು ಆಯ್ಕೆ ಮಾಡಿತ್ತು.

# ಜನರ ರಕ್ಷಣೆಗೆ ಆದ್ಯತೆ :
ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದ ನೂತನ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು,ರಾಜ್ಯದಲ್ಲಿ ಸಾರ್ವಜನಿಕರಿಗೆ ಉತ್ತಮ ಆಡಳಿತ ಕೊಡುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು‌.

ಒಬ್ಬ ಸಾಮಾನ್ಯ ಜನರಿಗೆ ನಾವು ಯಾವ ರೀತಿ ಭದ್ರತೆ ಕೊಡಬೇಕೊ ಅದನ್ನ ನಾವು ಕೊಡುತ್ತೇವೆ. ಇಲಾಖೆಯ ಸುಧಾರಣೆಗೆ ಹಲವು ಹೊಸ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಈ ಹಿಂದೆ ಆಯುಕ್ತರಾಗಿ ಕೆಲಸ ಮಾಡಿದ ಅನುಭವವಿದೆ ರಾಜ್ಯದಲ್ಲಿಯೂ ಕೂಡಾ ಹೊಸ ಆವಿಷ್ಕಾರಗಳನ್ನ ತರಲಾಗುತ್ತದೆ.ಅಕ್ರಮ ಬಾಂಗ್ಲಾವಲಸಿಗರ ವಿರುದ್ಧ ಮೊದಲು ಕ್ರಮ ಕೈಗೊಳ್ಳಲಾಗತ್ತೆದೆ.ಪೊಲೀಸರಿಂದ ಯಾವುದೇ ತೊಂದರೆ ಆದರೂ ನೇರವಾಗಿ ಬಂದು ಭೇಟಿಮಾಡಿಬಹುದು ಎಂದು ಸಲಹೆ ಮಾಡಿದರು.

# ಪ್ರವೀಣ್ ಸೂದ್ ಹಿನ್ನೆಲೆ:
ಹರಿಯಾಣದ ಕಾಂಗ್ರಾ ಜಿಲ್ಲೆಯಲ್ಲಿ 1964ರಲ್ಲಿ ಜನಿಸಿದ ಪ್ರವೀಣ್ ಸೂದ್ ದೆಹಲಿಯ ಐಐಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ ಟೆಕ್ ಪದವಿ ಪಡೆದಿದ್ದಾರೆ. 1986ರಲ್ಲಿ ಐಪಿಎಸ್ ಸೇವೆಗೆ ಸೇಪ೵ಡೆಯಾದರು. 1989ರಲ್ಲಿ ಮೈಸೂರಿನ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿಯಾಗಿ ವೃತ್ತಿ ಆರಂಭಿಸಿದರು.

ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಎಸ್ ಪಿಯಾಗಿ ಕೆಲಸ ಮಾಡಿದ್ದರು. 1996ರಲ್ಲಿ ಮುಖ್ಯಮಂತ್ರಿಗಳ ವಿಶಿಷ್ಠ ಸೇವಾ ಪದಕ ಪಡೆದಿದ್ದಾರೆ. ಬೆಂಗಳೂರಿನ ನಗರದಲ್ಲಿ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಸೇವೆ ಸಲ್ಲಿಸಿದರು. 1999ರಲ್ಲಿ ಮಾರಿಷ್ ನಲ್ಲಿ ಪೊಲೀಸ್ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.

2004 ರಿಂದ 2007ರಲ್ಲಿ ಮೈಸೂರು ಪೊಲೀಸ್ ಆಯುಕ್ತರಾಗಿದ್ದರು. 2008ರಲ್ಲಿ ಬೆಂಗಳೂರಿನ ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದರು. 2013ರಲ್ಲಿ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕರಾಗಿದ್ದರು. 2017ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು.

ಅನಂತರ ಸಿಐಡಿಗೆ ವರ್ಗಾವಣೆಗೊಂಡಿದ್ದರು. 2002ರಲ್ಲಿ ಪೊಲೀಸ್ ಪದಕ, 2011ರಲ್ಲಿ ರಾಷ್ಟ್ರಪತಿ ಪದಕ ಪಡೆದಿದ್ದಾರೆ. ಇಂದಿನಿಂದ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿರುವ ಸೂದ್ ಅವರು ಮುಂದಿನ ನಾಲ್ಕು ವರ್ಷಗಳ ಸೇವಾವಧಿಯನ್ನು ಹೊಂದಿದ್ದಾರೆ.

ಇತರೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ
ಅಲೋಕ್ ಮೋಹನ್, ಡಿಜಿಪಿ ಬಂಧಿಖಾನೆ.
ಎನ್.ಎಸ್.ಮೆಗರಿಕ್, ಡಿಜಿಪಿ, ಸಿಐಡಿ.
ಆರ್ ಪಿ ಶರ್ಮಾ, ಡಿಜಿಪಿ, ಪೊಲೀಸ್ ವಸತಿ ನಿಗಮ.
ಅಮೃತ್ ಪಾಲ್, ಎಡಿಜಿಪಿ, ಪೊಲೀಸ್ ನೇಮಕಾತಿ ವಿಭಾಗ.
ಉಮೇಶ್ ಕುಮಾರ್, ಎಡಿಜಿಪಿ, ಗೃಹ ಇಲಾಖೆ.
ಅರುಣ್ ಚಕ್ರವರ್ತಿ, ಎಡಿಜಿಪಿ, ರೈಲ್ವೆ

Facebook Comments

Sri Raghav

Admin