ರಾಜಭವನದಲ್ಲಿ ರಾಷ್ಟ್ರಪತಿ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.12- ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾಜಭವನದಲ್ಲಿ ಭೇಟಿಯಾಗಿ ಶುಭಕೋರಿದರು.

ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಬೆಳಗ್ಗೆ ರಾಜಭವನದಲ್ಲಿ ಸಿಎಂ ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯ ಭಾಸ್ಕರ್ ಭೇಟಿಯಾಗಿ ಅಭಿನಂದಿಸಿದರು.

ಕಳೆದ ಎರಡು ದಿನಗಳ ಹಿಂದೆ ಮೈಸೂರಿಗೆ ಆಗಮಿಸಿದ್ದ ರಾಮನಾಥ್ ಕೋವಿಂದ್ ಅವರು ಅವರನ್ನು ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿಗಳೇ ಬರಮಾಡಿಕೊಳ್ಳಬೇಕಿತ್ತು. ಆದರೆ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಬರಮಾಡಿಕೊಂಡಿದ್ದರು.

ಇಂದು ರಾಷ್ಟ್ರಪತಿಯವರು ಜಿಗಣಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಬಿಎಸ್‍ವೈ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ಭೇಟಿಯಾದರು. ಮೂಲಗಳ ಪ್ರಕಾರ ಇದೊಂದು ಸೌಜನ್ಯದ ಭೇಟಿ ಎಂದು ತಿಳಿದುಬಂದಿದೆ.

Facebook Comments