ಚಿನ್ನ ಗೆದ್ದು ದಾಖಲೆ ಬರೆದ ಹಿಮಾಗೆ ಪ್ರಧಾನಿ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

Hima-Dasd

ನವದೆಹಲಿ, ಜು.13-ಫಿನ್‍ಲೆಂಡ್‍ನ ಟ್ಯಾಂಪಿಯರ್‍ನಲ್ಲಿ ನಡೆಯುತ್ತಿರುವ ಐಎಎಎಫ್ ಅಂಡರ್-20 ವಿಶ್ವ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನ ಮಹಿಳೆಯರ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದು ದಾಖಲೆ ಸೃಷ್ಟಿಸಿದ ಭಾರತದ ಹೆಮ್ಮೆಯ ಅಥ್ಲೆಟ್ ಹಿಮಾ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.  18 ವರ್ಷದ ಪ್ರತಿಭಾವಂತೆ ಈ ಸಾಧನೆಯೊಂದಿಗೆ ವಿಶ್ವ ಯು-20 ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಬಂಗಾರ ಜಯಿಸಿದ ಭಾರತದ ಮೊಟ್ಟ ಮೊದಲ ಮಹಿಳಾ ಕ್ರೀಡಾಪಟು ಎಂಬ ಸಾಧನೆ ಮಾಡಿದ್ದಾರೆ.   ಈ ಸಾಧನೆಯನ್ನು ಶ್ಲಾಘಿಸಿರುವ ಮೋದಿ ಈ ಕ್ರೀಡಾಕೂಟದ 400 ಮೀಟರ್ ರೇಸ್‍ನಲ್ಲಿ ಐತಿಹಾಸಿಕ ಸ್ವರ್ಣ ಪದಕ ಗೆದ್ದ ಹಿಮಾ ದಾಸ್ ಅವರ ಬಗ್ಗೆ ಭಾರತಕ್ಕೆ ಹೆಮ್ಮೆಯಾಗಿದೆ ಎಂದು ಬಣ್ಣಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin