ನಿವೃತ್ತ ಪ್ರಾಂಶುಪಾಲರ ಕೊಲೆ ಪ್ರಕರಣ : ಐವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಅ.28- ನಿವೇದಿತ ನಗರದಲ್ಲಿ ನಿವೃತ್ತ ಪ್ರಾಂಶುಪಾಲರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಹಿನ್ನೆಲೆ ಗಾಯಕಿ ತಂದೆ ಸೇರಿದಂತೆ ಐದು ಮಂದಿ ಕೊಲೆಗಾರರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ತಿಳಿಸಿದರು. ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆಯಾದ ಪರಶಿವಮೂರ್ತಿ ಅವರ ಪತ್ನಿ ಸವಿತಾ ಸರಸ್ವತಿಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು.

ಸೆ.20ರಂದು ರಾತ್ರಿ ಪರಶಿವಮೂರ್ತಿ ಅವರ ಅಣ್ಣ ನಾಗರಾಜು ತನ್ನ ಮೊಬೈಲ್‍ಗೆ ಕರೆ ಮಾಡಿ ನಿನ್ನ ಪತಿ ಪರಶಿವಮೂರ್ತಿಯನ್ನು ಯಾರೋ ಅಪರಿಚಿತರು ಹೊಡೆದು ಕೊಲೆ ಮಾಡಿದ್ದಾರೆ. ಬೇಗ ಮನೆ ಬಳಿ ಬಾ ಎಂದಿದ್ದರು. ಆಕೆ ಬಂದು ನೋಡಿದಾಗ ಬಿದಿರಿನ ಚೇರ್‍ನಲ್ಲಿ ರಕ್ತದ ಮಡುವಿನಲ್ಲಿ ಪರಶಿವಮೂರ್ತಿ ಸಾವನ್ನಪ್ಪಿದ್ದರು.  ಸವಿತಾ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು ಎಂದರು.

ತನಿಖೆ ವೇಳೆ ಕೊಲೆ ಮಾಡಿದ ಆರೋಪಿಗಳಾದ ವಿಶ್ವಚೇತನ ಸಂಸ್ಕøತ ಪಾಠಶಾಲೆಯ ಮುಖ್ಯಶಿಕ್ಷಕ ಕೆ.ಆರ್.ಮೊಹಲ್ಲಾ ನಿವಾಸಿ, ಹಿನ್ನೆಲೆ ಗಾಯಕಿಯ ತಂದೆಯೂ ಆದ ಕೆ. ವಿಶ್ವನಾಥ (52) (ಕೊಲೆಗೆ ಸುಪಾರಿ ನೀಡಿದವರು), ಬ್ಯಾಂಕ್‍ನಲ್ಲಿ ರಿಕವರಿ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭುಗತಹಳ್ಳಿ ಗ್ರಾಮದ ನಿವಾಸಿ ನಾಗೇಶ (37), ಗಾರೆ ಕೆಲಸ ಮಾಡುವ ಅದೇ ಗ್ರಾಮದ ನಿವಾಸಿ ಎನ್. ನಿರಂಜನ್ (22), ಮಡಿವಾಳಸ್ವಾಮಿ ಸಂಸ್ಕøತ ಪಾಠಶಾಲೆಯ ಮುಖ್ಯ ಶಿಕ್ಷಕ, ವಿಶ್ವೇಶ್ವರ ನಗರ ನಿವಾಸಿ ಸಿದ್ದರಾಜು (54), (ಕೊಲೆ ಸುಪಾರಿಗೆ ಮಧ್ಯಸ್ಥಿಕೆ ವಹಿಸಿದವರು, ವಿಶ್ವಚೇತನ ಸಂಸ್ಕøತ ಪಾಠಶಾಲೆಯ ಸಹಶಿಕ್ಷಕ, ರಮಾಬಾಯಿ ನಗರ ನಿವಾಸಿ ಪರಶಿವ (55)(ಕೊಲೆಗೆ ಸುಪಾರಿ ನೀಡಿದವರು) ಅವರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಬಂಧಿತರಿಂದ 55,000ರೂ., ನಾಲ್ಕು ದ್ವಿಚಕ್ರ ವಾಹನಗಳು, ಒಂದು ಟಾಟಾ ಏಸ್ ಗೂಡ್ಸ್ ವಾಹನ, ಎಂಟು ಮೊಬೈಲ್, ಎರಡು ಚಾಕು, ರಕ್ತಸಿಕ್ತ ಬಟ್ಟೆಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಮೃತ ಪರಶಿವಮೂರ್ತಿ ನಡೆಸುತ್ತಿದ್ದ ಸಂಸ್ಕøತ ಪಾಠಶಾಲೆಯಲ್ಲಿನ ಶಿಕ್ಷಕರು ಪ್ರತಿ ತಿಂಗಳು ಅವರ ವೇತನದಲ್ಲಿ ನಿರ್ದಿಷ್ಟಪಡಿಸಿದ ಹಣ ಕೊಡುವಂತೆ ನೀಡುತ್ತಿದ್ದ ಕಿರುಕುಳ, ಹಿಂಸೆ ಹಾಗೂ ಅವಾಚ್ಯಶಬ್ದಗಳಿಂದ ಬೈದಾಡುತ್ತ ತುಚ್ಛವಾಗಿ ಕಾಣುತ್ತಿರುವುದೇ ಕೊಲೆಗೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ ಎಂದು ಡಿಸಿಪಿ ಹೇಳಿದರು.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಂ.ಎಸ್.ಪೂರ್ಣಚಂದ್ರ ತೇಜಸ್ವಿ ಉಸ್ತುವಾರಿಯಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಅದರಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆಯ ಪಿಐ ಆರ್.ವಿಜಯಕುಮಾರ್, ಕುವೆಂಪುನಗರ ಪೊಲೀಸ್ ಠಾಣೆಯ ಪಿಐ ಜೆ.ಸಿ.ರಾಜು, ಸರಸ್ವತಿಪುರಂ ಪೆÇಲೀಸ್ ಠಾಣೆಯ ಪಿಎಸ್‍ಐ ಭವ್ಯ, ಕೃಷ್ಣರಾಜ ವಿಭಾಗದ ಅಪರಾಧ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.

Facebook Comments