“ಕೆಎಸ್‌ಆರ್‌ಟಿಸಿ ಬಸ್ ಓಡಿಸಲು ಖಾಸಗಿ ಚಾಲಕರನ್ನು ಬಳಸಿಕೊಳ್ಳುತ್ತಿಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.12- ಖಾಸಗಿ ಚಾಲಕರನ್ನು ಒಂದೇ ಒಂದು ಕೆಎಸ್‌ಆರ್‌ಟಿಸಿ ಬಸ್ ಓಡಿಸಲು ಬಳಸಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಖಾಸಗಿ ಚಾಲಕರನ್ನು ಕೆಎಸ್‌ಆರ್‌ಟಿಸಿ ಬಸ್ ಓಡಿಸಲು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ ನೀಡಿರುವ ಮುಖ್ಯ ಸಂಚಾರಿ ವ್ಯವಸ್ಥಾಪಕರು ಖಾಸಗಿಯವರಾಗಲಿ, ನಿವೃತ್ತಿ ಹೊಂದಿದವರಾಗಲಿ ಯಾವುದೇ ಕೆಎಸ್‍ಆರ್‍ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಚಾಲಕರು ಮತ್ತು ನಿರ್ವಾಹಕರನ್ನು ಕೇಳಿದರೆ ನಾವು ಸಾರಿಗೆ ನೌಕರರು ಎಂದು ಒಪ್ಪಿಕೊಳ್ಳುತ್ತಿಲ್ಲ. ಏಕೆಂದರೆ ನೌಕರರಿಂದ ಅವರಿಗೆ ನಿರಂತರ ಬೆದರಿಕೆ, ಹಲ್ಲೆ ಮಾಡುವುದಾಗಿ ಕರೆಗಳು ಬರುತ್ತಿರುವುದರಿಂದ ಅವರು ತಮ್ಮ ಗುರುತನ್ನು ಮರೆ ಮಾಚುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮೈಸೂರಿನಿಂದ ಚಾಮರಾಜನಗರ ಬಸ್‍ನಲ್ಲಿ ಚಾಲನೆ ಮಾಡುತ್ತಿರುವ ಖಾಸಗಿ ಬಸ್ ಡ್ರೈವರ್ ಆರೋಪಕ್ಕೆ ಸಂಬಂಧಪಟ್ಟಂತೆ ಅವರು ಈ ಸ್ಪಷ್ಟನೆ ನೀಡಿದ್ದಾರೆ.

Facebook Comments