ಮಹಾರಾಷ್ಟ್ರದ ಸತಾರದಲ್ಲಿ ಭೀಕರ ಅಪಘಾತ, ಬೆಳಗಾವಿ ಮೂಲದ 6 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ(ಚಿಕ್ಕೋಡಿ), ಸೆ.12- ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸತಾರಾ ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮುಂಬೈ ನಗರದಿಂದ ಬೆಳಗಾವಿಗೆ ಬರುತ್ತಿದ್ದ ಎಸ್‍ಆರ್‍ಎಸ್ ಖಾಸಗಿ ಬಸ್ ಮುಂದೆ ಸಾಗುತ್ತಿದ್ದ ಲಾರಿ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‍ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಬಸ್‍ನಲ್ಲಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಸ್ಥಳೀಯರ ಸಹಾಯದಿಂದ ಬಸ್‍ನಿಂದ ಹೊರತೆಗೆದು, ಶವಾಗಾರಕ್ಕೆ ರವಾನಿಸಲಾಗಿದೆ. 20 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಸತಾರಾ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ