ಅಮಿತ್ ಷಾ ಹೇಳಿಕೆ ‘ಜುಮ್ಲಾ’ ಎಂದು ಜರಿದ ಪ್ರಿಯಾಂಕಾ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ನ.13-ಉತ್ತರಪ್ರದೇಶದ ರಸ್ತೆಗಳಲ್ಲಿ ಮಧ್ಯರಾತ್ರಿಯಲ್ಲಿ 16 ವರ್ಷದ ಬಾಲಕಿ ಚಿನ್ನಾಭರಣ ಧರಿಸಿ ಓಡಾಡಬಹುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜುಮ್ಲಾ ಎಂದು ಜರಿದಿದ್ದಾರೆ. ಉತ್ತರಪ್ರದೇಶದಲ್ಲಿ ಮಹಿಳೆಯರು ಪ್ರತಿ ನಿತ್ಯ ಎಂತಹ ಜೀವನ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಅಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ಪ್ರಿಯಾಂಕಾ ಟ್ವಿಟ್ ಮಾಡಿದ್ದಾರೆ.

ಟ್ವಿಟರ್‍ನಲ್ಲಿ ಅವರು ಇತ್ತೀಚೆಗೆ ಕಾನ್ಪುರದಲ್ಲಿ ಮೂವರು ಮಹಿಳೆಯರ ಮೇಲೆ ಅಟ್ಯಾಕ್ ಮಾಡಿ ಸರ ಕಸಿದು ಪರಾರಿಯಾಗಿರುವ ಮಾಧ್ಯಮ ವರದಿಯನ್ನು ಪೋಸ್ಟ್ ಮಾಡಿದ್ದಾರೆ. ಉತ್ತರ ಪ್ರದೇಶ ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಿರುವುದರಿಂದ ಮಹಿಳೆಯರು ಹೋರಾಟಕ್ಕೆ ಧುಮುಕುವ ಅನಿವಾರ್ಯತೆ ಎದುರಾಗಿದೆ. ಮಹಿಳೆಯರು ರಾಜಕೀಯಕ್ಕೆ ಬಂದರೆ ತಮ್ಮ ಭದ್ರತೆ ಕುರಿತ ಕಾಯ್ದೆ ಜಾರಿಗೆ ತರಲು ಸಾಧ್ಯವಿದೆ ಎಂದು ಅವರು ಕರೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಅಮಿತ್ ಷಾ ಅವರು ಉತ್ತರಪ್ರದೇಶದ ಕಾನೂನು ಸುವ್ಯವಸ್ಥೆ ಸೂಕ್ತವಾಗಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ 16 ವರ್ಷದ ಬಾಲಕಿಯರು ಆಭರಣ ಧರಿಸಿ ಮಧ್ಯರಾತ್ರಿ ರಸ್ತೆಗಳಲ್ಲಿ ಸಂಚರಿಸಬಹುದು ಎಂದು ಹೇಳಿಕೆ ನೀಡಿದ್ದರು.

Facebook Comments