ನಿರ್ಮಾಪಕ ಸೌಂದರ್ಯ ಜಗದೀಶ್‍ರ ಪತ್ನಿ , ಪುತ್ರನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.26- ಹಲ್ಲೆ ಮಾಡಿ ಪರಾರಿಯಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಪತ್ನಿ, ಪುತ್ರ ಹಾಗೂ ಇತರರನ್ನು ಆದಷ್ಟು ಬೇಗ ಬಂಧಿಸಬೇಕೆಂದು ಒತ್ತಾಯಿಸಿ ಸುಮಾರು 50ಕ್ಕೂ ಹೆಚ್ಚು ಮಂದಿ ಮಹಿಳೆಯರು ಇಂದು ಜಗದೀಶ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಶನಿವಾರ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದ್ದರೂ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಅವರನ್ನು ಇನ್ನೂ ಏಕೆ ಬಂಧಿಸಿಲ್ಲ. ಈ ಕೂಡಲೇ ಎಲ್ಲರನ್ನೂ ಬಂಧಿಸಬೇಕು ಎಂದು ಪ್ರತಿಭಟನಾ ನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಮಂಜುಳಾ ಪುರುಷೋತ್ತಮ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಗೂ ಮುನ್ನ ಮಂಜುಳಾ ಪುರುಷೋತ್ತಮ್ ಅವರ ಮನೆಗೆ ಮಹಿಳೆಯರು ಭೇಟಿ ನೀಡಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Facebook Comments