ವಾಯುವಿಹಾರಕ್ಕೆ ಶುಲ್ಕ ನಿಗದಿ ; ಸಾರ್ವಜನಿಕರಿಂದ ರಸ್ತೆ ತಡೆದು ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಜೂ 16- ಕೋಟೆ ಕೆರೆ ಪ್ರವೇಶಕ್ಕೆ ಪ್ರವೇಶ ಶುಲ್ಕ ನಿಗದಿ ಮಾಡಿದ ಹಿನ್ನಲೆಯಲ್ಲಿ ದಿನನಿತ್ಯ ವಾಯುವಿಹಾರಕ್ಕೆ ಆಗಮಿಸುವ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ದಿನನಿತ್ಯ ವಾಯುವಿಹಾರಕ್ಕೆಂದು ಆಗಮಿಸುವ ಹಿರಿಯ ನಾಗರೀಕರಿಗೆ ಇಂದು ಬೆಳಗ್ಗೆ ಶಾಕ್ ಕಾದಿತ್ತು.

ಕೋಟೆ ಕೆರೆ ಪ್ರವೇಶಿಸಲು ಏಕಾಏಕಿ ಪ್ರವೇಶ ಶುಲ್ಕ ನಿಗದಿ ಮಾಡಲಾಗಿತ್ತು. ಇದನ್ನು ವಿರೋಧಿಸಿ ವಾಯುವಿಹಾರಿಗಳು ಪ್ರತಿಭಟನೆ ನಡೆಸಿದರು. ಪ್ರವೇಶ ಶುಲ್ಕದಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಬೆಳಗ್ಗೆ ಒಳ್ಳೆಯ ವಾತಾವರಣ ಸಿಗುತ್ತದೆ ಎಂದು ವಾಯುವಿಹಾರಕ್ಕೆ ಬರುತ್ತೇವೆ. ಈಗ ಅದಕ್ಕೂ ಶುಲ್ಕ ನಿಗದಿ ಮಾಡಿದ್ದಾರೆ. ಕೂಡಲೇ ಇದನ್ನು ರದ್ದು ಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನಾ ಸಂದರ್ಭದಲ್ಲಿ ಸಂಚಾರ ದಟ್ಟಣೆಯುಂಟಾಗಿ ಕೆಲ ಕಾಲ ವಾಹನ ಸವಾರರು ಪರದಾಡುವಂತಾಯಿತು.  ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಸಾರ್ವಜನಿಕ ಮಾತ್ರ ಪ್ರವೇಶ ಶುಲ್ಕ ತೆಗೆಯಬೇಕು ಎಂದು ಒತ್ತಾಯಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ