ಕೊರೋನಾ ಕುರಿತಂತೆ ನೈಜ ಮಾಹಿತಿ ನೀಡಲು ಸ್ವಯಂ ಸೇವಕರ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು :  ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಅಂಗವಾಗಿ ಈ ಕುರಿತಂತೆ ಹರಡುವ ವದಂತಿ ಹಾಗೂ ಅಪಪ್ರಚಾರವನ್ನು ತಡೆದು ಜನರಿಗೆ ನೈಜ ಮಾಹಿತಿ ಒದಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಪ್ರಾರಂಭಿಸಿರುವ ಕಾರ್ಯಕ್ರಮಕ್ಕೆ ಸ್ವಯಂ ಸೇವಕರನ್ನು ಆಹ್ವಾನಿಸಿದೆ.

ಕೊರೊನಾ ಯೋಧರೆಂದೇ ಕರೆಯಲ್ಪಡುವ ಈ ಸ್ವಯಂ ಸೇವಕರು ರಾಜ್ಯಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಹರಡುವ ವದಂತಿಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೈಜ ಮಾಹಿತಿ ಜನರಿಗೆ ತಲುಪಿಸಲು ಸಹಕಾರಿಯಾಗಲಿದ್ದಾರೆ. ಸ್ಥಳೀಯವಾಗಿ ಕೊರೊನಾ ಸಂಬಂಧಿತ ವಿದ್ಯಮಾನಗಳನ್ನು ತಂಡದ ಗಮನಕ್ಕೆ ತರಲು ಕ್ರಮವಹಿಸುವರು.

ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿಗಳು ಸ್ವೀಕೃತವಾಗು ತ್ತಿದ್ದು, ನೋಂದಾಯಿತ ಸ್ವಯಂ ಸೇವಕರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಸೂಕ್ತ ತರಬೇತಿ, ಸುರಕ್ಷತಾ ಕಿಟ್ ಹಾಗೂ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ.

ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 4 ಸ್ವಯಂ ಸೇವಕರು ದಿನಕ್ಕೆ ನಾಲ್ಕು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವರು. ಬೆಂಗಳೂರು ನಗರದಲ್ಲೆ ಸುಮಾರು 120 ಸ್ವಯಂ ಸೇವಕರಿಗೆ ಅವಕಾಶವಿದ್ದು, ರಾಜ್ಯಾದಂತ ಸುಮಾರು 3000 ಕೊರೋನಾ ಯೋಧರು ನೋಂದಾಯಿ ಸುವ ನಿರೀಕ್ಷೆಯಿದೆ. ಆನ್‍ಲೈನ್ ಅರ್ಜಿ ಮೂಲಕ ಮೊದಲ ದಿನವೇ 400 ಕ್ಕೂ ಹೆಚ್ಚು ಸ್ವಯಂ ಸೇವಕರು ನೋಂದಾಯಿಸಿಕೊಂಡಿದ್ದಾರೆ.

 

Facebook Comments