ಪುದುಚೇರಿಯಲ್ಲಿ ಕಾಂಗ್ರೆಸ್‌ಗೆ ಮತ್ತೆ ಮರ್ಮಾಘಾತ ಫಿಕ್ಸ್..! ಶಾಕಿಂಗ್ ಸಮೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಪುದುಚೇರಿ,ಫೆ.28- ಆಂತರಿಕ ಭಿನ್ನಮತದಿಂದಾಗಿ ಇತ್ತೀಚೆಗೆ ಸರ್ಕಾರ ಕಳೆದುಕೊಂಡ ಕಾಂಗ್ರೆಸ್ ಪಕ್ಷ ಮುಂದೆ ನಡೆಯುವ ವಿಧಾನಸಭೆ ಚುನಾವಣೆಯಲ್ಲೂ ಕೂಡ ಹಿನ್ನಡೆ ಅನುಭವಿಸಲಿದೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ. ಚುನಾವಣಾಪೂರ್ವ ಸಮೀಕ್ಷೆ ನಡೆಸಿರುವ ಎಬಿಪಿ, ಸೀ ವೋಟರ್ಸ್ ಸಮೀಕ್ಷೆ, ಪಾಂಡಿಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಮುನ್ಸೂಚನೆ ನೀಡಿದೆ.

30 ಕ್ಷೇತ್ರಗಳಿರುವ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿ 17ರಿಂದ 20 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತಗಳಿಂದ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ.

ಕಾಂಗ್ರೆಸ್ ಪಕ್ಷ 8ರಿಂದ 12 ಸ್ಥಾನ ಗಳಿಸಬಹುದು. ಇತರ ಪಕ್ಷಗಳು 1-3 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ ಎಂದು ವರದಿ ಉಲ್ಲೇಖಿಸಿದೆ. ಒಂದು ವೇಳೆ ವರದಿಯ ಅಂಶಗಳು ನಿಜವಾದರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಿದಂತಾಗುತ್ತದೆ.

ಕರ್ನಾಟಕದಲ್ಲಿ ಜೆಡಿಎಸ್ ಜೊತೆಗೆ ಸಮ್ಮಿಶ್ರ ನಡೆಸಿದ ಕಾಂಗ್ರೆಸ್ ಪಕ್ಷ ಆಪರೇಷನ್ ಕಮಲದಿಂದ ಅಧಿಕಾರ ಕಳೆದುಕೊಂಡಿತ್ತು. ತಮಿಳುನಾಡಿನಲ್ಲಿ ಸ್ಥಳೀಯ ಪಕ್ಷಗಳ ಆಪತ್ಯ ಹೆಚ್ಚಾಗಿದ್ದು, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.

ರಾಜಶೇಖರ್ ರೆಡ್ಡಿ ಅವರ ಅಕಾಲಿಕ ನಿಧನದ ಬಳಿಕ ಅವಿಭಜಿತ ಅಂಧ್ರಪ್ರದೇಶದಲ್ಲೂ ನೆಲೆ ಕಳೆದುಕೊಂಡಿದೆ. ಕೇರಳದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಸಾಮಥ್ರ್ಯ ಕಾಂಗ್ರೆಸ್‍ಗೆ ಇಲ್ಲವಾಗಿದೆ. ಹೀಗಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಅಪತ್ಯವನ್ನು ಕಳೆದುಕೊಂಡಿದೆ.

ಇತ್ತೀಚಿನವರೆಗೂ ಪುದುಚೇರಿಯಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿತ್ತು. ಆದರೆ ಐದು ಮಂದಿ ಶಾಸಕರು ಬಂಡಾಯ ಎದ್ದಿದ್ದರಿಂದಾಗಿ ನಾರಾಯಣಸ್ವಾಮಿ ಅವರ ಸರ್ಕಾರ ಪತನವಾಗಿದೆ. ಕಾಂಗ್ರೆಸ್ ಶಾಸಕ ಬಂಡಾಯದ ಹಿಂದೆ ಬಿಜೆಪಿಯ ಕೈವಾಡ ಎಂದು ಆರೋಪಿಸಲಾಗಿದೆ.

ಮುಂದಿನ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಆಸೆಯನ್ನು ಕಾಂಗ್ರೆಸ್ ಹೊಂದಿತ್ತು. ಆದರೆ ಸಮೀಕ್ಷಾ ವರದಿ ಆಘಾತ ನೀಡಿದೆ. ಈ ಸಮೀಕ್ಷೆ ನೆರೆಯ ತಮಿಳುನಾಡು ಹಾಗೂ ಕೇರಳ ವಿಧಾನಸಭೆಯ ಚುನಾವಣೆ ಮೇಲೂ ಕೂಡ ಪರಿಣಾಮ ಬೀರಲಿದೆ.

Facebook Comments

Sri Raghav

Admin