ಅಪ್ಪು ಅಭಿಮಾನಿಗಳಿಂದ ಸೈಕಲ್ ಯಾತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರ, ಡಿ.5- ಮೈಸೂರಿನ ಅಪ್ಪು ಅಭಿಮಾನಿಗಳು ಬೆಂಗಳೂರಿಗೆ ಸುಮಾರು 160 ಕಿ.ಮೀ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಬೆಂಗಳೂರಿಗೆ ತೆರಳುತ್ತಿರುವ ನವೀನ್ ಕುಮಾರ್ ಶಿವು ಸುರೇಶ್, ರಾಘವ್, ಭೀಮರಾಜ್, ಸುನಿಲ್, ಯುವರಾಜ್, ನವೀನ್ ಚನ್ನಪಟ್ಟಣ ನಗರಕ್ಕೆ ಆಗಮಿಸಿದ ತಂಡವನ್ನು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ಸ್ವಾಗತಿಸಿ ಸನ್ಮಾನಿಸಿದರು.

ಚನ್ನಪಟ್ಟಣದಿಂದ ರಾಮನಗರ, ಬಿಡದಿ ಮಾರ್ಗವಾಗಿ ಬೆಂಗಳೂರು ತಲುಪಲಿದ್ದಾರೆ. ಪುನೀತ್ ಮೃತಪಟ್ಟಾಗ ಅವರ ಅಂತ್ಯಕ್ರಿಯೆಗೆ ಹೋಗಲು ಆಗಲಿಲ್ಲ. ಅದಕ್ಕಾಗಿ ಸೈಕಲ್ ಮೂಲಕ ಹೋಗಿ ಸಮಾಗೆ ಭೇಟಿ ನೀಡಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ನವೀನ್ ಕುಮಾರ್ ತಿಳಿಸಿದ್ದಾರೆ.

ಸೈಕಲ್ ಯಾತ್ರೆಯ ಮುಖಾಂತರ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೈಕಲ್ ಯಾತ್ರಿಗಳನ್ನು ಸ್ವಾಗತಿಸಿ ಮಾತನಾಡಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಪುನೀತ್ ರಾಜ್‍ಕುಮಾರ್ ತಮ್ಮ ಬಾಲ್ಯದಲ್ಲಿ 6 ವರ್ಷದ ಹುಡುಗನಾಗಿದ್ದಾಗ ಬಣ್ಣ ಹಚ್ಚಿ ತಮ್ಮ ತಂದೆಯ ಜೊತೆ ಚಲನಚಿತ್ರ ಜಗತ್ತಿಗೆ ಪಾದಾರ್ಪಣೆ ಮಾಡಿ, ತಮ್ಮ 40 ವರ್ಷಗಳ ಕಾಲ ಸುದೀರ್ಘವಾಗಿ ಚಲನಚಿತ್ರ ರಂಗದಲ್ಲಿ ಪಯಣಿಸಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದು ಖ್ಯಾತಿ ಪಡೆದಿದ್ದರು.

ಅಲ್ಲದೆ ಎಲೆ ಮರೆಯ ಕಾಯಿಯಂತೆ ಪ್ರಚಾರ ಬಯಸದೆ,1800ಕ್ಕೂ ಹೆಚ್ಚಿನ ಬಡ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತಿದ್ದರು.ಅಲ್ಲದೆ ವೃದ್ಧಾಶ್ರಮ, ಗೋಶಾಲೆ, ಅನಾಥಾಶ್ರಮ ನೋಡಿಕೊಳ್ಳುತ್ತಿದ್ದರು. ಅಲ್ಲದೆ ಕೆಎಂಎಫ್ ರಾಯಭಾರಿಯಾಗಿ ಅದರ ಬೆಳವಣಿಗೆಗೆ ಸಹಕಾರಿಯಾಗಿದ್ದರು. ಅವರ ಅಕಾಲಿಕ ನಿಧನವು ಕನ್ನಡ ಚಲನಚಿತ್ರ ಜಗತ್ತಿಗೆ ಹಾಗೂ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ತಮ್ಮ ತಂದೆಯ ಹಾದಿಯಲ್ಲಿ ಸಾಗುತ್ತಿದ್ದ ಅವರು ಎಷ್ಟೋ ಬಡ ಕುಟುಂಬಗಳಿಗೆ ದಾರಿ ದೀಪವಾಗಿದ್ದರು. ಇಂತಹ ಪುಣ್ಯಾತ್ಮನಿಗೆ ರಾಜ್ಯದ ಜನ ಗೌರವ ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟರು ಸಂದರ್ಭದಲ್ಲಿ ರಾಮನಗರ ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್ ಗೌಡ ರಾಜ್ಯ ಉಪಾಧ್ಯಕ್ಷ ಬೆಂಕಿ ಶ್ರೀಧರ್ ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ ಮಂಗ¼ವಾರಪೇಟೆ ತಿಮ್ಮರಾಜು, ಪಿ.ಡಿ ರಾಜು, ಪುರಿ ಅಂಗಡಿ ಸಿದ್ದು ಚಿಕ್ಕೇನಹಳ್ಳಿ ಸಿದ್ದಪ್ಪಾಜಿ, ರವಿ ಸೇರಿದಂತೆ ಪುನೀತ್ ಅಭಿಮಾನಿಗಳು ಹಾಜರಿದ್ದರು.

Facebook Comments