ಕೊರೊನಾ ಲಸಿಕೆ ಪಡೆದ ಪುನಿತ್ ರಾಜ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.7- ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಇಂದು ಮೊದಲ ಹಂತದ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್‍ನಲ್ಲಿ ಫೋಟೋ ಹಂಚಿಕೊಂಡಿರುವ ಅವರು 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ನಾನು ಕೊರೋನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದೇನೆ. ನೀವೂ 45 ವರ್ಷ ಮೇಲ್ಪಟ್ಟವರಾಗಿದ್ದರೆ ವ್ಯಾಕ್ಸಿನೇಷನ್ ಪಡ್ಕೊಳ್ಳಿ ಎಂದು ಫೋಟೋ ಜೊತೆ ಕೇಳಿಕೊಂಡಿದ್ದಾರೆ.

ಯುವರತ್ನ ಸಿನಿಮಾ ರಿಲೀಸ್ ಸಂದರ್ಭವೇ ಕೊರೋನಾ ಕೂಡಾ ಹೆಚ್ಚಾಗಿದ್ದು, ಸಿನಿಮಾ ಪ್ರದರ್ಶನಕ್ಕೂ ತೊಂದರೆಯಾಗಿತ್ತು. ನಟ ಸಿಎಂ ಅವರನ್ನು ಭೇಟಿಯಾಗಿ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದರು.

Facebook Comments