ಪಂಜಾಬ್‍ನಲ್ಲಿ ರಾತ್ರಿ ಕಫ್ರ್ಯು ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಚಂಡೀಘರ್,ನ.25- ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವುದರಿಂದ ರಾಜ್ಯದ ಎಲ್ಲಾ ನಗರ ಪಟ್ಟಣಗಳಲ್ಲಿ ಡಿಸೆಂಬರ್ ಒಂದರಿಂದ ರಾತ್ರಿ ಕಫ್ರ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಿಳಿಸಿದ್ದಾರೆ.

ಚಳಿಗಾಲ ಪ್ರಾರಂಭವಾಗಿರುವುದರಿಂದ ರಾಜ್ಯದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 1ರಿಂದ ರಾತ್ರಿ ಕಫ್ರ್ಯೂ ಜಾರಿಯಾಗಲಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಎಂದಿದ್ದಾರೆ.  ಎಲ್ಲಾ ನಗರಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ವಿಸಲಾಗುವುದು ಎಂದು ಸಿಎಂ ಎಚ್ಚರಿಸಿದ್ದಾರೆ.

Facebook Comments