ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಹೊಸ ಯೋಜನೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ.!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ನಾಗರೀಕನಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಹೊಸ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಮನೆ ಮನೆಗೆ ‘ಗಂಗಾ ಯೋಜನೆ ’ಎಂಬ ಹೊಸ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,ಈ ಮೂಲಕ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕೊಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಸಿದ್ಧತೆ ಮಾಡಿಕೊಂಡಿದೆ.

ವಿಧಾನಸೌಧದಲ್ಲಿ ಹೊಸ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು, ಪ್ರತಿ ಮನೆ ಮನೆಗೂ ಗಂಗಾ ಯೋಜನೆಯಡಿ ಕೊಳಾಯಿ (ನಲ್ಲಿ) ಕೊಡಲು ತೀರ್ಮಾನ ಮಾಡಿದ್ದೇವೆ. ಇನ್ನೊಂದು ತಿಂಗಳಲ್ಲಿ ಈ ಯೋಜನೆ ಒಂದು ಹಂತಕ್ಕೆ ಬರಲಿದೆ ಎಂದು ಹೇಳಿದರು. ಕೊಳಾಯಿ ಮೂಲಕ ಮನೆ ಮನೆಗೆ ನೀರು ಕೊಡುವ ಯೋಜನೆ ಇದಾಗಿದೆ.

ವರದಿ ಸಿದ್ಧವಾದ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಕೇಂದ್ರ ಈ ಯೋಜನೆಗೆ ಎಷ್ಟು ಅನುದಾನ ಕೊಡುತ್ತೆ ನೋಡಿಕೊಂಡು ರಾಜ್ಯ ಸರ್ಕಾರ ಇದ್ರ ಬಗ್ಗೆ ನಿರ್ಧಾರ ಮಾಡುತ್ತೆ ಅಂತ ಸ್ಪಷ್ಟಪಡಿಸಿದರು. ಇನ್ನು ಕೇಂದ್ರ ಸರ್ಕಾರ ಇದಕ್ಕೆ ಎಷ್ಟು ಅನುದಾನ ಕೊಡುತ್ತದೆ ಮತ್ತು ರಾಜ್ಯ ಸರ್ಕಾರದಿಂದ ಎಷ್ಟು ಭರಿಸಬೇಕು ಎಂಬುವುದರ ಕುರಿತು ಚರ್ಚೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ನೀಡುವುದು ಈ ಯೋಜನೆಯ ಉದ್ದೇಶ. ಪೈಪ್​​​ಗಳ ಮೂಲಕ ಮನೆ ಮನೆಗೆ ಕೊಳಾಯಿ ಹಾಕಿ ನೀರು ಸರಬರಾಜು ಮಾಡಲಾಗುತ್ತದೆ. ತಿಂಗಳಿಗೆ ಇಂತಿಷ್ಟು ಶುಲ್ಕ ವಿಧಿಸಲಾಗುತ್ತದೆ. ಸರ್ಕಾರವೇ ನೀರು ಬಿಡುವ ನಿರ್ವಹಣೆ ಮಾಡುವುದರಿಂದ ಹೆಚ್ಚು ನೀರು ಪೋಲಾಗದಂತೆ ತಡೆಯಬಹುದು ಎಂದು ಹೇಳಿದರು.

ರಾಜ್ಯದ 6,021 ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ಅಳವಡಿಕೆ, ತ್ಯಾಜ್ಯ ಸಂಸ್ಕರಣ ಘಟಕಗಳ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ಆ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಭೂಮಿ ಕೊಡುತ್ತಿದ್ದೇವೆ. ಘನತ್ಯಾಜ್ಯಕ್ಕೆ ಕಾಮಗಾರಿ ಕೂಡ ಶುರು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಶುದ್ಧ ಕುಡಿಯವ ನೀರಿನ ಘಟಕಗಳ ಬಗ್ಗೆ ಬಹಳಷ್ಟು ದೂರುಗಳು ಬಂದಿವೆ. ಹೀಗಾಗಿ ತನಿಖೆ ಮಾಡಿಸಲು ಒಂದು ಏಜೆನ್ಸಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

# ಏನಿದು ಗಂಗಾ ಯೋಜನೆ?
ಪ್ರತಿಯೊಬ್ಬರಿಗೂ ಶುದ್ಧವಾದ ಕುಡಿಯುವ ನೀರು ನೀಡುವುದು ಈ ಯೋಜನೆ ಉದ್ದೇಶ. ಪೈಪ್ ಗಳ ಮೂಲಕ ಮನೆ ಮನೆಗೆ ಕೊಳಾಯಿ ಹಾಕಿ ನೀರು ಸರಬರಾಜು ಮಾಡುವುದು. ತಿಂಗಳಿಗೆ ಇಂತಿಷ್ಟು ಅಂತ ಶುಲ್ಕ ವಿಧಿಸೋದು. ಸರ್ಕಾರವೇ ನೀರು ಬಿಡುವ ನಿರ್ವಹಣೆ ಮಾಡುವದರಿಂದ ಹೆಚ್ಚು ನೀರು ಪೋಲು ಆಗದಂತೆ ತಡೆಯೋದು. ಈ ಮೂಲಕ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತದೆ.

Facebook Comments

Sri Raghav

Admin