‘ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಲ್ಲಿ ನೋಡುವಾಸೆ’ : ಪುಟ್ಟರಂಗಶೆಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 19-ರಾಜ್ಯದ ಮುಖ್ಯ ಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಪ್ರಸ್ತುತ ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾರೆ. ಅವರ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನು ನೋಡುತ್ತೇನೆ ಎಂದು ಹೇಳಿದ್ದರು.

ಈ ಹಿಂದೆ ಕೂಡ ಸಿದ್ದರಾಮಯ್ಯನವರು ನಮ್ಮ ಮುಖ್ಯಮಂತ್ರಿ ಎಂದು ಹೇಳಿದ್ದು ಆ ಮಾತಿಗೆ ಈಗಲೂ ಬದ್ಧ ಎಂದರು. ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಹೊರಟ್ಟಿ ಹೇಳಿದಂತೆ ನಡೆಯುವುದಿಲ್ಲ.  ಚುನಾವಣೆ ಎದುರಿಸಿದರೆ ಅದರ ಕಷ್ಟವೇನೆಂಬುದು ಗೊತ್ತಾಗುತ್ತಿತ್ತು ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಮೈತ್ರಿ ಸರ್ಕಾರದಲ್ಲಿ ನಡೆಯುತ್ತವೆಯೇ ಹೊರತು ಬೇರೆ ಯಾರ ಮಾತುಗಳೂ ನಡೆಯುವುದಿಲ್ಲ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin