ಮರದಲ್ಲಿ ಹೆಬ್ಬಾವು: ಗ್ರಾಮಸ್ಥರಲ್ಲಿ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

ಹನೂರು -ತಾಲೂಕಿನ ಮುತ್ತಶೆಟ್ಟಿಯೂರು ಗ್ರಾಮದ ಕಾಡಂಚಿನ ಜಮೀನೊಂದರ ಮರದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಸುಮಾರು 15 ಅಡಿಗೂ ಹೆಚ್ಚು ಉದ್ದವಿರುವ ಬೃಹತ್ ಹೆಬ್ಬಾವು ಪ್ರತ್ಯಕ್ಷಗೊಂಡಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಇದನ್ನು ಕಂಡು ಭಯಭೀತರಾಗಿದ್ದಾರೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿದ್ದಾರೆ. ಈ ಹಾವಿನ ಗಾತ್ರ ನೋಡಿದರೆ ಇನ್ನು ಈ ಪ್ರದೇಶದಲ್ಲಿ ಹಲವಾರು ಹೆಬ್ಬಾವುಗಳಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ರೈತರು ಹಾಗೂ ವೃದ್ಧರು, ಮಕ್ಕಳು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಕೂಡಲೇ ಹಾವನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ