ಕ್ವಾರಂಟೈನ್‍ನಲ್ಲಿದ್ದ ಯುವಕ ಆತ್ಮಹತ್ಯೆಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

ಬೀದರ್, ಮೇ 26- ಮುಂಬೈನಿಂದ ಹಿಂದಿರುಗಿ ಕ್ವಾರಂಟೈನ್‍ನಲ್ಲಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ಜಿಲ್ಲಾಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಸಚಿನ್ ಜಾದವ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಎಂಟು ದಿನಗಳ ಹಿಂದೆ ಮುಂಬೈನಿಂದ ಪತ್ನಿಯ ಜತೆ ಜಿಲ್ಲಾಗೆ ಹಿಂದಿರುಗಿದ್ದ.

ಮುಂಬೈನಿಂದ ಬಂದ ಕಾರಣ ದಂಪತಿಯನ್ನು ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜಾದವ್ ಇಂದು ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಮಾಹಿತಿ ತಿಳಿದ ಔರಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾದವ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Facebook Comments