ಕ್ವಾರಂಟೈನ್ ಮುಗಿಸಿ ಹಿಂತಿರುಗುತ್ತಿದ್ದ ಯುವಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಮೇ 26- ಹದಿನಾಲ್ಕು ದಿನಗಳ ಕ್ವಾರಂಟೈನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಯುವಕ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ನಗರದ ಇಂದಿರಾನಗರ ನಿವಾಸಿ ಚಂದ್ರ ಕಾಂತ್ (32) ಮೃತಪಟ್ಟವರು. ಹದಿನಾಲ್ಕು ದಿನಗಳಿಂದ ಚಂದ್ರಕಾಂತ್ ಬಿಸಿಎಂ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿದ್ದರು.

ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದರು. ಮಾರ್ಗಮಧ್ಯೆ ಚಂದ್ರಕಾಂತ್ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಸ್ಥಳೀಯರ ನೆರವಿನೊಂದಿಗೆ ಚಂದ್ರಕಾಂತ್ ಅವರನ್ನು ಜೇಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ವ್ಯಕ್ತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಗ್ಯ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments