“ಸಂಪುಟದಲ್ಲಿ ಸ್ಥಾನ ಸಿಗದವರು ನಿರಾಶರಾಗಬಾರದು” : ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.20-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದವರು ನಿರಾಶರಾಗಬಾರದು ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ.

ಮೊದಲ ಹಂತದಲ್ಲಿ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರೂ ಕೂಡ ನಿರಾಶರಾಗಬಾರದು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡದೆ ಎಲ್ಲರನ್ನು ಒಗ್ಗೂಡಿಸಿ ಸರ್ಕಾರವನ್ನು ಮುನ್ನಡೆಸುತ್ತೇವೆ ಎಂದರು.

ನನಗೆ ಮಂತ್ರಿ ಸ್ಥಾನ ಹೊಸದೇನೂ ಅಲ್ಲ. ಈ ಹಿಂದೆ ಉಪಮುಖ್ಯಮಂತ್ರಿ, ಗೃಹ, ಸಾರಿಗೆ ಇಲಾಖೆಗಳ ಜವಾಬ್ದಾರಿಯನ್ನು ಪಕ್ಷ ನೀಡಿತ್ತು. ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದು ನಮ್ಮ ಮುಖ್ಯ ಆಶಯವಾಗಿತ್ತು. ಅದು ಈಗ ಸಫಲವಾಗಿದೆ ಎಂದು ಹೇಳಿದರು.

Facebook Comments

Sri Raghav

Admin