ಹೆಚ್ಡಿಕೆ ಭೇಟಿಯಾದ ಸಚಿವ ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ‌.11-ಕಂದಾಯ ಸಚಿವ ಆರ್.ಅಶೋಕ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ‌.

ಬಿಡದಿ ಬಳಿಯ ಕೇತಗಾನಹಳ್ಳಿಯ ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಅಶೋಕ್ ಚರ್ಚಿಸಿದರು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು. ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ.

ಪ್ರಸ್ತುತ ರಾಜ್ಯದ ರೈತಾಪಿ ಜನ ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಶಾಸಕರಾದ ಸಾ.ರಾ.ಮಹೇಶ್ ಅವರು ನನ್ನ ಜತೆ ಇದ್ದರು ಎಂದು ಹೇಳಿದ್ದಾರೆ.

Facebook Comments

Sri Raghav

Admin