ಇನ್ನೆರಡು ದಿನದಲ್ಲಿ ಆಕ್ಸಿಜನ್ ಕೊರತೆ ಸಂಪೂರ್ಣ ನಿವಾರಣೆ : ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ.15-ಒಂದೇರಡು ದಿನಗಳಲ್ಲಿ ಆಕ್ಸಿಜನ್ ಕೊರತೆ ಸಂಪೂರ್ಣವಾಗಿ ನಿವಾರಣೆಯಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದರು.ನಾಗವಾರ ಮುಖ್ಯರಸ್ತೆಯ ಹಜ್ ಭವನ ಕೋವಿಡ್ ಕೇರ್ ಸೆಂಟರ್ ಅನ್ನು ಆಕ್ಸಿಜನ್ ಸೆಂಟರ್ ಆಗಿ ಪರಿವರ್ತಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

400 ಹಾಸಿಗೆ ಸಾಮಥ್ರ್ಯದ ಹಜ್‍ಭವನ ಕೋವಿಡ್ ಕೇರ್ ಸೆಂಟರ್‍ನ 100 ಹಾಸಿಗೆಗಳನ್ನು ಆಕ್ಸಿಜನ್ ಬೆಡ್‍ಗಳಾಗಿ ಪರಿವರ್ತಿಸಲಾಗಿದೆ. ಒಂದೆರಡು ದಿನಗಳಲ್ಲಿ ಮತ್ತೆ 50 ಹಾಸಿಗೆಗಳನ್ನು ಹೆಡಿಯು ಬೆಡ್‍ಗಳನ್ನಾಗಿ ಉಳಿದ 50 ಬೆಡ್‍ಗಳನ್ನು ಐಸಿಯು ಬೆಡ್‍ಗಳನ್ನಾಗಿ ಪರಿವರ್ತಿಸಲಾಗುವುದು ಎಂದರು.

ಈಗಾಗಲೆ ಕೋವಿಡ್ ಕೇರ್ ಸೆಂಟರ್‍ಗಳನ್ನು ಆಕ್ಸಿಜನ್ ಸೆಂಟರ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಪ್ರತಿನಿತ್ಯ 100 ಹಾಸಿಗೆಗಳನ್ನು ಆಕ್ಸಿಜನ್ ಬೆಡ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಹೀಗಾಗಿ ಒಂದೇರಡು ದಿನದೊಳಗೆ ಆಕ್ಸಿಜನ್ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ ಎಂದು ಅವರು ಭರವಸೆ ನೀಡಿದರು.

ಎರಡನೆ ಅಲೆ ಮುಗಿಯುತ್ತಿದ್ದಂತೆ ಮೂರನೆ ಅಲೆ ಅಬ್ಬರಿಸುವ ಸಾಧ್ಯತೆ ಇರುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇಡುವಂತೆ ಅವರು ಸಲಹೆ ನೀಡಿದರು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಶಾಸಕ ಕೃಷ್ಣಭೈರೇಗೌಡ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Facebook Comments

Sri Raghav

Admin