ಮುಂಬೈನಲ್ಲಿರುವ  ಸ್ನೇಹಿತರು ವಾಪಸ್ ಬರುತ್ತಾರೆ : ದೇಶಪಾಂಡೆ ವಿಶ್ವಾಸ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.15- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಅವರು ರಾಜೀನಾಮೆ ವಾಪಸ್ ಪಡೆಯುವ ವಿಶ್ವಾಸವಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ. ಅದೇ ರೀತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರ ಮನವೊಲಿಸುವ ಪ್ರಯತ್ನ ನಡೆಸಲಾಯಿತು.

ಆದರೂ ಅವರು ಮುಂಬೈಗೆ ಹೋಗಿದ್ದಾರೆ. ಎಲ್ಲವೂ ಪರಿಹಾರವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನೀವ್ಯಾರು ಮಂತ್ರಿಯಾಗುವವರಲ್ಲ, ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ ಎಂದು ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದರು.

Facebook Comments