ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರಿಂದ ಉಪವಾಸ ಸತ್ಯಾಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.14- ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರು ನ್ಯಾಯಕ್ಕಾಗಿ ಆಗ್ರಹಿಸಿ ಬ್ಯಾಂಕ್ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಠೇವದಾರರಿಗೆ ವಂಚಿಸಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಬಂಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಠೇವದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರ ಹಿತರಕ್ಷಣಾ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ವೇದಿಕೆ ಅಧ್ಯಕ್ಷ ಕೆ.ವಿ.ಆದಿಶೇಷಯ್ಯ, ಕಾರ್ಯದರ್ಶಿ ಎಚ್.ಎನ್. ಪದ್ಮರಾವ್ ಅವರು ಠೇವದಾರರಿಗೆ ಸೂಕ್ತ ನ್ಯಾಯ ಸಿಗಬೇಕು.

ಮುಗ್ಧ ಠೇವದಾರರನ್ನು ವಂಚಿಸಿರುವವರನ್ನು ಬಂಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ನ್ಯಾಯ ದೊರಕಿಸಿಕೊಡಬೇಕೆಂದು ಮನವಿ
ಮಾಡಿದ್ದಾರೆ.

ಈ ಸಂಬಂಧ ಮುಖ್ಯ ನ್ಯಾಯಾೀಶರಿಗೆ ಪತ್ರ ಬರೆದಿರುವ ಅವರು ಬಸವನಗುಡಿಯ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶಗಳು ನಮ್ಮಲ್ಲಿ ವಿಶ್ವಾಸ ಮೂಡಿಸಿದೆ.

ಐಪಿಸಿ ಅಕಾರಿಗಳ ನೇತೃತ್ವದಲ್ಲಿ ಸಿಐಡಿ ತನಿಖೆ ಮಾಡಿ ವರದಿ ಮಾಡಲು ಮಾಡಿರುವ ಆದೇಶ, ಅದರಂತೆ ತನಿಖೆ ಪ್ರಗತಿಯಲ್ಲಿರುತ್ತದೆ. ಆದೆ, ಕೆಲವು ಕಾಣದ ಕೈಗಳು ಪ್ರಭಾವ ಬಳಸಿ ತನಿಖೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಅನುಮಾನ ಠೇವಣಿದಾರರಲ್ಲಿ ಮೂಡಿರುತ್ತದೆ.

ಬ್ಯಾಂಕ್‍ನಲ್ಲಿ ಭ್ರಷ್ಟಾಚಾರ ಮಾಡಿ ಠೇವದಾರರ ಹಣ ನುಂಗಿರುವ ಜನ ತಮ್ಮ ರಕ್ಷಣೆಗಾಗಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ತನಿಖೆ ಸಂದರ್ಭದಲ್ಲಿ ಮತ್ತಷ್ಟು ಪರಿಣಾಮ ಬೀರುವ ರೀತಿಯಲ್ಲಿ ತನಿಖಾಕಾರಿಗಳ ತನಿಖೆಯ ವೈಖರಿಗೆ ಮತ್ತಷ್ಟು ಬಿಸಿ ಮುಟ್ಟಿಸಬೇಕೆಂದು ಮನವಿ ಮಾಡಿರುವ ಅವರು ಠೇವದಾರರಿಗೆ ನ್ಯಾಯ ದೊರಕುವಂತಾಗಬೇಕು ಎಂದು ಪತ್ರಮುಖೇನ ಆಗ್ರಹಿಸಿದ್ದಾರೆ.

Facebook Comments

Sri Raghav

Admin