ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.13- ಕೇಂದ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯ ಜನತಾದಳ (ಆರ್‍ಜೆಡಿ) ಮಾಜಿ ನಾಯಕ ರಘುವಂಶ ಪ್ರಸಾದ್ ಸಿಂಗ್ (74) ಇಂದು ಬೆಳಗ್ಗೆ ದೆಹಲಿಯಲ್ಲಿ ನಿಧನರಾದರು.

ಅನಾರೋಗ್ಯದ ಕಾರಣ ಕೆಲ ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಘುವಂಶ ಪ್ರಸಾದ್ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರ ಹತ್ತಿರದ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ನಾಲ್ಕು ಬಾರಿ ಸಂಸದರಾಗಿದ್ದ ಅವರು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಗ್ರಾಮೀಣಾಭಿವೃದ್ಧಿಗಾಗಿ ಕೆಲವು ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಹೆಗ್ಗಳಿಕೆಗೆ ಸಿಂಗ್ ಪಾತ್ರರಾಗಿದ್ದರು.

ರಾಷ್ಟ್ರೀಯ ಜನತಾದಳದ ರಾಷ್ಟ್ರೀಯ ಉಪಾಧ್ಯಕ್ಷರಾದ ಯಾದವ್ ಕೆಲವು ದಿನಗಳ ಹಿಂದಷ್ಟೇ ಆರ್‍ಜೆಡಿ ತೊರೆಯುವುದಾಗಿ ಪಕ್ಷದ ಪರಮೋಚ್ಛ ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಪತ್ರ ಬರೆದಿದ್ದರು.

ರಘುವಂಶ ಪ್ರಸಾದ್ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಆರ್‍ಜೆಡಿ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments