‘ಮಾದಕ’ ನಟಿ ರಾಗಿಣಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.16- ಡ್ರಗ್ಸ್ ಜಾಲ ಪ್ರಕರಣದಲ್ಲಿ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಕನ್ನಡ ಚಿತ್ರರಂಗದ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.ಇದರಿಂದಾಗಿ ಇನ್ನು ನಾಲ್ಕು ದಿನಗಳ ಕಾಲ ಜೈಲೇ ಗತಿ ಎನ್ನವಂತಾಗಿದೆ.

ಜಾಮೀನು ನೀಡುವಂತೆ ನಟಿ ರಾಗಿಣಿ ದ್ವಿವೇದಿ ಪರ ವಕೀಲರು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.

ಈ ಪ್ರಕರಣದಲ್ಲಿ ಹೊಸ ವಿಶೇಷ ಸರಕಾರಿ ಅಭಿಯೋಜಕ (ಎಸ್ ಪಿಪಿ)ರುೀಮಕ ಹಿನ್ನೆಲೆಯಲ್ಲಿ ಹೊಸ ಅಭಿಯೋಜಕರಿಂದ ಕಾಲಾವಕಾಶ ಕೋರಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಪರ ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆ ಜಾಮೀನು ಅರ್ಜಿಯ ವಿಚಾರಣೆಯನ್ನ ಸೆ.19ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಇತರೆ ಆರೋಪಿಗಳಾದ ರಾಹುಲ್ ತೋಷೆ, ಶಿವಪ್ರಕಾಶ್, ವಿನಯ್ ಕುಮಾರ್ ಜಾಮೀನು ಅರ್ಜಿ ವಿಚಾರಣೆಯೂ ಸೆ.19 ಕ್ಕೆ ಮುಂದೂಡಿಕೆಯಾಗಿದೆ.

ಸೋಮವಾರ ನ್ಯಾಯಾಲಯ ನಟಿ ರಾಗಿಣಿ ದ್ವಿವೇದಿಯನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಸೋಮವಾರ ರಾತ್ರಿ ಪರಪ್ಪನ ಅಗ್ರಹಾರ ಸೇರಿರುವ ರಾಗಿಣಿಯನ್ನ ಕಾಣಲು ಪೋಷಕರು ಜೈಲಿನ ಬಳಿ ಆಗಮಿಸಿದ್ದರು. ಆದರೆ, ಅವಕಾಶ ಸಿಗದ ಹಿನ್ನೆಲೆ ವಾಪಾಸ್ಸಾಗಿದ್ದರು.

Facebook Comments