ನಟಿ ರಾಗಿಣಿ ಜಾಮೀನು ಅರ್ಜಿ ಮುಂದೂಡಿದ ಸುಪ್ರೀಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.4- ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ. ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ಜನವರಿಗೆ ಮುಂದೂಡಿದ್ದು, ರಾಗಿಣಿ ವಿಚಾರಣೆ ನಡೆಸಿ ಪ್ರತಿಕ್ರಿಯೆ ನೀಡುವಂತೆ ಸಿಸಿಬಿ ಪೊಲೀಸರಿಗೆ ಈ ಸಂಬಂಧ ನೋಟಿಸ್ ನೀಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಮೂರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ಜಾಮೀನಿಗಾಗಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.  ಕೋರ್ಟ್‍ನಲ್ಲಿ ಅರ್ಜಿ ತಿರಸ್ಕಾರವಾಗಿತ್ತು. ಹೀಗಾಗಿ ಸುಪ್ರೀಂಕೋರ್ಟ್‍ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜನವರಿಗೆ ವಿಚಾರಣೆ ಮುಂದೂಡಿರುವ ಹಿನ್ನೆಲೆಯಲ್ಲಿ ಸದ್ಯ ರಾಗಿಣಿಗೆ ಬಿಡುಗಡೆಯ ಭಾಗ್ಯವಿಲ್ಲದಂತಾಗಿದೆ. ಅಲ್ಲದೆ, ಹೊಸ ವರ್ಷವನ್ನೂ ಜೈಲಿನಲ್ಲಿಯೇ ಆಚರಿಸಬೇಕಿದೆ.

Facebook Comments