ಕಾರ್ಯಕರ್ತರಿಗೆ ಧೈರ್ಯ ತುಂಬಿದ ರಾಹುಲ್‍ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 22-ನಕಲಿ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಆತಂಕ ಪಡಬೇಡಿ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.

ಮುಂದಿನ 24 ಗಂಟೆ ಬಹಳ ಮುಖ್ಯವಾದ ಅವಧಿ. ನೀವು ಬಹಳ ಎಚ್ಚರಿಕೆಯಿಂದಿರಬೇಕು. ಯಾವುದೇ ಕಾರಣಕ್ಕೂ ಭಯಪಡಬೇಡಿ.ಸತ್ಯದ ಪರವಾಗಿ ಹೋರಾಟ ಮಾಡಿದ್ದೀರ. ನಕಲಿ ಚುನಾವಣೋತ್ತರ ಸಮೀಕ್ಷೆಗಳಿಂದ ನಿರಾಶರಾಗಬೇಡಿ. ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ. ಕಾಂಗ್ರೆಸ್ ಪಕ್ಷದ ಮೇಲೂ ನಂಬಿಕೆ ಇಡಿ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ ಎಂದು ಟ್ವೀಟರ್‍ನಲ್ಲಿ ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ