ದೇಶಾದ್ಯಂತ ರಾಜೀವ್‍ಗಾಂಧಿ 75ನೆ ಜನ್ಮ ಜಯಂತಿ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.19- ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ 75ನೆ ಜನ್ಮ ಜಯಂತಿಯನ್ನು ನಾಳೆ ದೇಶಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು ನಮ್ಮ ತಂದೆಯವರು ಪ್ರಧಾನಮಂತ್ರಿಯಾಗಿ ದೇಶದ ವಿಜ್ಞಾನ ಮತ್ತು ಮಾಹಿತಿ-ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ.

ಅವರ 75ನೆ ಜನ್ಮ ಜಯಂತಿಯನ್ನು ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಿದ್ದಾರೆ. ಈ ಪ್ರಯುಕ್ತ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ರಾಹುಲ್ ತಿಳಿಸಿದ್ದಾರೆ.

Facebook Comments