ನೋಂದಣಿ ಮಾಡಿಸಿಕೊಳ್ಳದವರಿಗೂ ಲಸಿಕೆ ನೀಡಿ : ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.10-ಇಂಟರ್‍ನೆಟ್ ಸೌಲಭ್ಯ ಹೊಂದಿಲ್ಲದವರು ಜೀವನ ಸಾಗಿಸಲು ಆರ್ಹರು. ಹೀಗಾಗಿ ಅಂತವರಿಗೂ ಲಸಿಕೆ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ಒತ್ತಾಯಿಸಿದ್ದಾರೆ. ಲಸಿಕೆ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಗಳಿಗೆ ತಮ್ಮ ಹೆಸರು ನೋಂದಣಿ ಮಾಡಿಸದೆ ನಡೆದುಕೊಂಡು ಬರುವವರಿಗೂ ಲಸಿಕೆ ಹಾಕಲು ಕ್ರಮ ಕೈಗೊಳ್ಳಿ ಎಂದು ರಾಹುಲ್ ಟ್ವಿಟ್ ಮಾಡಿದ್ದಾರೆ.

ಸ್ಮಾರ್ಟ್ ಫೋನ್ ಇಲ್ಲದ, ಡಿಜಿಟಲ್ ಸೌಲಭ್ಯ ಗೊತ್ತಿಲ್ಲದ ಗ್ರಾಮೀಣ ಪ್ರದೇಶದವರು ಹಾಗೂ ಬಡವರಿಗೆ ಲಸಿಕೆ ಹಾಕಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ.

ಹೀಗಾಗಿ ಲಸಿಕೆ ಪಡೆದುಕೊಳ್ಳಲು ಕೋವಿನ್ ಪೋರ್ಟಲ್‍ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮಾಡಿರುವ ಕಡ್ಡಾಯವನ್ನು ತೆಗೆದುಹಾಕುವಂತೆಯೂ ಅವರು ಒತ್ತಾಯಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ನಿವಾರಣಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಲಸಿಕಾ ನೀತಿಯನ್ನು ಕಾಂಗ್ರೆಸ್ ವಿರೋಧಿಸಿಕೊಂಡು ಬರುತ್ತಿರುವುದು ಸಾಮಾನ್ಯವಾಗಿದೆ.

Facebook Comments

Sri Raghav

Admin