ಮಹಿಳೆಯರಿಗೆ ಥ್ಯಾಂಕ್ಸ್ ಹೇಳಿದ ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 19- ಲೋಕಸಭಾ ಚುನಾವಣೆ ಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಧನ್ಯವಾದ ಸಲ್ಲಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂತಹ ತಾಯಂದಿರು ಮತ್ತು ಸೋದರಿಯರ ಧ್ವನಿಗಳನ್ನು ಆಲಿಸುವ ಅಗತ್ಯವಿದೆ ಎಂದಿದ್ದಾರೆ.

ಲೋಕಸಭೆಯ 7ನೆ ಮತ್ತು ಕೊನೆ ಹಂತಕ್ಕೆ 8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಇಂದು ಮತದಾನ ಆರಂಭ ವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ರಾಹುಲ್ ಮಹಿಳೆಯರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಇಂದು ಏಳನೆ ಮತ್ತು ಕೊನೆ ಹಂತದ ಮತದಾನ: ಎಲ್ಲಾ ಹಂತಗಳಲ್ಲೂ ತಾಯಂದಿರು ಮತ್ತು ಸಹೋ ದರಿಯರು ತಮ್ಮ ಹಕ್ಕುಗಳನ್ನು ಚಲಾಯಿಸಿದ್ದಾರೆ.

ಅವರ ಧ್ವನಿಗಳನ್ನು ಆಲಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin