ಸೋಲಿನ ಹೊಣೆ ಹೊತ್ತು ರಾಜೀನಾಮೆಗೆ ಮುಂದಾದ ರಾಹುಲ್..!?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ 24- ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿರುವ ಹಾಗೂ ಉತ್ತರಪ್ರದೇಶದ ತಮ್ಮ ಪ್ರಾಬಲ್ಯದ ಕ್ಷೇತ್ರ ಅಮೇಥಿಯಲ್ಲಿ ಪರಾಭವಗೊಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಚುನಾವಣಾ ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಅವರು ರಾಜೀನಾಮೆ ನೀಡಲು ಸಿದ್ದರಾಗಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಆದಾಗ್ಯೂ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ರಾಹುಲ್ ಗಾಂಧಿಯವರು ರಾಜೀನಾಮೆ ನೀಡುವ ವರದಿಗಳನ್ನು ನಿರಾಕರಿಸಿದ್ದಾರೆ. ರಾಹಲ್ ಗಾಂಧಿಯವರ ಈ ನಿರ್ಧಾರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಇನ್ನೊಂದು ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

17ನೇ ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್, ಜನರ ಆಸಕ್ತಿಯನ್ನು ನಾನು ಗಮನಿಸುತ್ತೇನೆ ಎಂದಿದ್ದಾರೆ.  ಪಕ್ಷದ ಸೋಲಿಗೆ ಮುಖ್ಯ ಕಾರಣ ಏನು ಎಂದು ಎಲ್ಲಿ ತಪ್ಪಾಗಿದೆ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಚಲಿತರಾಗದೇ ವಿಶ್ವಾದಲ್ಲಿರಬೇಕೆಂದರು.

ಇಂದು ಮೋದಿ ಅವರ ದಿನ. ಅವರಿಗೆ ಅಭಿನಂದನೆ ಸಲ್ಲಿಸುವ ದಿನ ಎಂದು ರಾಹುಲ್ ಗಾಂಧಿ ಹೇಳಿದರು. ಇಂದು ಮೋದಿಗೆ ಅತ್ಯುತ್ತಮವಾದದ್ದನ್ನು ಬಯಸುವ ದಿನ, ಅವರು ರಾಷ್ಟ್ರದ ಜನರ ಹಿತಾಸಕ್ತಿಯನ್ನು ಕಾಪಾಡುತ್ತಾರೆ ಎಂದು ಭಾವಿಸಿದ್ದೇನೆ ಹೇಳಿದರು.

ಮತದಾರರು ಅಂತಿಮ ತೀರ್ಪನ್ನು ನಿರ್ಧರಿಸುವವರು ಮತ್ತು ಅವರು ತಮ್ಮ ತೀರ್ಪನ್ನು ನೀಡಿದ್ದಾರೆ ಎಂದು ಪ್ರಚಾರಕ್ಕೆ ಮುಂಚೆಯೇ ನಾನು ಹೇಳಿದ್ದೆ ಎಂದು ಅವರು ಹೇಳಿದರು.

ಅಂತಿಮ ಇನಿಂಗ್ಸ್‍ನಲ್ಲಿ ಇದು ನಿಜವಾಗಿದೆ. ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಪ್ರಬಲಕಾರಿಯಾಗಿ ತನ್ನ ಸಾಮಥ್ರ್ಯವನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin