ಲೋಕಸಭೆಯಲ್ಲಿ ರಾಹುಲ್-ರಾಜನಾಥ್  ಟಾಕ್ ಫೈಟ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.11- ದೇಶದ ರೈತರ ಸ್ಥಿತಿ ಶೋಚನೀಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ಅವರ ಆರೋಪಗಳಿಗೆ ತಿರುಗೇಟು ನೀಡಿದ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಈ ಪರಿಸ್ಥಿತಿಗೆ ದಶಕದ ಕಾಲ ಆಡಳಿತ ನಡೆಸಿದ ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು.

ಲೋಕಸಭೆ ಯಲ್ಲಿಂದು ಶೂನ್ಯವೇಳೆ ವಿಷಯ ಪ್ರಸ್ತಾಪಿಸಿದ ರಾಹುಲ್‍ಗಾಂಧಿ, ನಿರ್ದಿಷ್ಟವಾಗಿ ಕೇರಳದ ತಮ್ಮ ಕ್ಷೇತ್ರ ವಯನಾಡು ಸೇರಿದಂತೆ ದೇಶದೆಲ್ಲೆಡೆ ರೈತರ ಪರಿಸ್ಥಿತಿ ಶೋಚನೀಯವಾಗಿದೆ.

ಅವರ ಹಿತಾಸಕ್ತಿಗಳನ್ನು ರಕ್ಷಿಸಿ ಕೃಷಿಕರ ಜೀವನ ಮಟ್ಟ ಸುಧಾರಿಸಲು ಪ್ರಧಾನಮಂತ್ರಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು. ಸದನದಲ್ಲಿ ಹಾಜರಿದ್ದ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಮಧ್ಯಪ್ರವೇಶಿಸಿ ಮಾತನಾಡಿ, ಇದಕ್ಕೆ ದಶಕದ ಕಾಲ ಆಡಳಿತ ನಡೆಸಿದ ಆಗಿನ ಕಾಂಗ್ರೆಸ್ ಸರ್ಕಾರ ಕಾರಣ.

ಆ ಅವಧಿಯಲ್ಲಿ ದೇಶದ ಹಲವೆಡೆ ರೈತರ ಆತ್ಮಹತ್ಯೆ ಪ್ರಕರಣಗಳು ಅತ್ಯಧಿಕ ಮಟ್ಟದಲ್ಲಿದ್ದವು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಕೃಷಿಕರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ. ಅಲ್ಲದೆ, ಅನ್ನದಾತರ ಆದಾಯ ಶೇ.20 ರಿಂದ 25ರಷ್ಟು ಹೆಚ್ಚಾಗಿದೆ ಎಂದು ಸಮರ್ಥನೆ ನೀಡಿದರು.

Facebook Comments