ಗ್ಯಾಂಗ್‍ರೇಪ್ ಆಗಿದ್ದ ಮಹಿಳೆ ಭೇಟಿ ಮಾಡಿ ಸಾಂತ್ವಾನ ಹೇಳಿದ ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

ಅಳ್ವಾರ್, ಮೇ 16- ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಜಿಲ್ಲೆಯ ದಲಿತ ಮಹಿಳೆಯನ್ನು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಭೇಟಿ ಮಾಡಿ ಸಾಂತ್ವನ ಹೇಳಿ ಸಂತ್ರಸ್ತೆ ಮತ್ತು ಕುಟುಂಬದ ಸದಸ್ಯರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.

ವಾಸ್ತವವಾಗಿ ರಾಹುಲ್ ನಿನ್ನೆಯೇ ಆಳ್ವಾರ್‍ಗೆ ಭೇಟಿ ನೀಡಿ ಸಂತ್ರಸ್ತೆ ಮತ್ತು ಕುಟುಂಬದವರನ್ನು ಭೇಟಿ ಮಾಡುವ ಕಾರ್ಯಕ್ರಮವಿತ್ತು. ಕಾರ್ಯಕ್ರಮದ ಬದಲಾವಣೆಯಿಂದಾಗಿ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ಆದಷ್ಟು ಶೀಘ್ರವಾಗಿ ನ್ಯಾಯ ದೊರಕಿಸಿಕೊಡುತ್ತೇನೆ. ಈ ವಿಷಯದಲ್ಲಿ ನಾನು ರಾಜಕಾರಣ ಮಾಡಲು ಬಯಸುವುದಿಲ್ಲ. ಮಾನವೀಯತೆ ದೃಷ್ಟಿಯಿಂದ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದು ನನ್ನ ಕರ್ತವ್ಯ ಎಂದು ತಿಳಿಸಿದರು.

ಪ್ರಕರಣದಲ್ಲಿ ಕಾನೂನು ಕುಣಿಕೆಯಿಂದ ಯಾರೊಬ್ಬರನ್ನೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ. ಆರೋಪಿಗಳನ್ನು ಖಂಡಿತವಾಗಿ ಬಂಧಿಸಲಾಗುವುದು ಎಂದು ಹೇಳಿದರು.  ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್, ಉಪಮುಖ್ಯಮಂತ್ರಿ ಸಚಿನ್ ಪೈಲೆಟ್ ಮತ್ತು ಕಾಂಗ್ರೆಸ್ ನಾಯಕ ಅವಿನಾಶ್ ಪಾಂಡೆ ರಾಹುಲ್ ಅವರೊಂದಿಗೆ ಇದ್ದರು.

Facebook Comments