ರಾಯಗಡ್ ಕಟ್ಟಡ ಕುಸಿತ ದುರಂತ : ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಆ.26- ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಐದು ಅಂತಸ್ತಿನ ಕಟ್ಟಡ ಕುಸಿದು ಅಪಾರಪ್ರಮಾಣದ ಸಾವುನೋವು ಸಂಭವಿಸಿದೆ. ಮೃತಮಟ್ಟವರ ಸಂಖ್ಯೆ ಏರುತ್ತಲೇಯಿದ್ದು, ಇಂದು ಬೆಳಗ್ಗೆ 15 ಮಂದಿ ಸಾವನ್ನಪ್ಪಿದ್ದಾರೆ.

7 ಪುರುಷರು ಮತ್ತು 8 ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಕಾಣೆಯಾಗಿದ್ದಾನೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆಗಸ್ಟ್ 24 ರಂದು ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಮಹಾದ್‍ನ ವಸತಿ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಈಗಾಗಲೇ 19 ಮಂದಿ ನಾಪತ್ತೆಯಾಗಿದ್ದಾರೆ. ಕುಸಿತದ ವೇಳೆ ವ್ಯಕ್ತಿಯೊಬ್ಬ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದರು.

ಅವಶೇಷಗಳಡಿ ಸಿಲುಕಿರುವವರ ಹೊರೆತೆಗೆಯುವ ಕಾರ್ಯ ಮುಂದುವರೆದಿದ್ದು, ಇಂದು ಬೆಳಗ್ಗೆ 15 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಘಟನೆ ಸಂಬಂಧ ಸೆಕ್ಷನ್ 304, 304ಎ, 337, 338 ಮತ್ತು ಭಾರತೀಯ ದಂಡ ಸಂಹಿತೆ 34ರಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin