ಅಜಯ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ರೈಲ್ ರೋಖೊ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಅ.18-ಲಖೀಮ್‍ಪುರ್ ಖೇರಿ ದುರ್ಘಟನೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಅವರನ್ನು ಬಂಧಿಸುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳು ಇಂದು ಶಾಂತಿಯುತ ರೈಲ್ ರೋಖೊ ಚಳವಳಿ ನಡೆಸಿದರು.

ಸಂಯುಕ್ತ ಕಿಸಾನ್ ಮೋರ್ಚಾ ಒಕ್ಕೂಟದ ಪದಾಕಾರಿಗಳು ಇಂದು ಉತ್ತರಪ್ರದೇಶದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಶಾಂತಿಯುತ ರೈಲ್ ರೋಖೊ ಚಳವಳಿ ನಡೆಸುತ್ತಿದ್ದಾರೆ.

ನಾಲ್ಕು ರೈತರನ್ನು ಬಲಿ ಪಡೆದುಕೊಂಡಿರುವ ಘಟನೆಗೆ ಸಂಬಂಸಿದಂತೆ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವವರೆಗೆ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಈ ಮಧ್ಯೆ ರೈಲು ತಡೆದು ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಲಕ್ನೋ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Facebook Comments