ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಭಾರತೀಯ ರೈಲ್ವೆ ಇಲಾಖೆಯ ರೈಲ್ ವೀಲ್ ಫ್ಯಾಕ್ಟರಿಯು 192 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲು ಚಕ್ರ ಕಾರ್ಖಾನೆ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 15.10.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 15.11.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಭಾರತೀಯ ರೈಲ್ವೆ ಇಲಾಖೆಯ ರೈಲ್ ವೀಲ್ ಫ್ಯಾಕ್ಟರಿಯು 192 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಅಂಗೀಕೃತಗೊಂಡ 10ನೇ ತರಗತಿ ಪಾಸಾಗಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ಶಿಕ್ಷಣ ಪಡೆದಿರಬೇಕು. ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕನಿಷ್ಠ 15, ಗರಿಷ್ಠ 24 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದು. ಹಿಂದಿಳಿದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.

ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ವಿಕಲಚೇತನರು, ಮಹಿಳೆಯರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ..
ಹೆಚ್ಚಿನ ಮಾಹಿತಿಗಾಗಿ https://rwf.indianrailways.gov.in ಗೆ ಭೇಟಿ ನೀಡಿ

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ