ಮಿಸ್ ಮಾಡಿಕೊಳ್ಳಬೇಡಿ : ರೈಲ್ವೆಯಲ್ಲಿ 1,03,769 ಹುದ್ದೆಗಳ ನೇಮಕಾತಿ..!

ಈ ಸುದ್ದಿಯನ್ನು ಶೇರ್ ಮಾಡಿ

ರೈಲ್ವೆ ನೇಮಕಾತಿ ಸೆಲ್(ಆರ್‌ಆರ್‌ಸಿ) ನಲ್ಲಿ ಖಾಲಿ ಇರುವ 1,03,769 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 12.03.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 12.04.2019 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಐಟಿಐಯಲ್ಲಿ ಎನ್ ಸಿ ವಿ ಟಿ /ಎಸ್ ಸಿ ವಿ ಟಿ ಅಥವಾ ರಾಷ್ಟ್ರೀಯ ಅಪ್ರೆಂಟಿಶಿಪ್ ಸರ್ಟಿಫಿಕೇಟ್ (ಎನ್ ಎ ಸಿ) ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ ಸಮಾನವಾದ ಮಂಜೂರಾದ ಸಂಸ್ಥೆಗಳಿಂದ ಗುರುತಿಸಲ್ಪಟ್ಟ ಐಟಿಐ ವಿದ್ಯಾರ್ಹತೆ ಪಡೆದಿರಬೇಕು.

18 ರಿಂದ 33 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಮಾಜಿ ಸರ್ಕಾರಿ / ಅಲ್ಪಸಂಖ್ಯಾತರು / ಆರ್ಥಿಕ ಹಿಂದುಳಿದ ವರ್ಗಗಳಿಗೆ ರೂ. 250 / –ಇತರೆ ಅಭ್ಯರ್ಥಿಗಳಿಗೆ ರೂ. 500 / – ನಿಗದಿಪಡಿಸಲಾಗಿದೆ.

ಕಂಪ್ಯೂಟರ್ ಆಧಾರಿತ ಮತ್ತು ದೈಹಿಕ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. https://bit.ly/2F0SrUi

RRC

[ # ಎಚ್ಚರಿಕೆ : ‘ಈ ಸಂಜೆ’ ಸುದ್ದಿಗಳನ್ನು ನಕಲಿಸುವವರ ವಿರುದ್ಧ  ಕಾನೂನು ಕ್ರಮ ಕೈಗೊಳ್ಳಲಾಗುವುದು ]

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ