ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂದುವರೆಯಲಿದೆ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.26- ಮುಂಗಾರು ಚುರುಕಾಗಿದ್ದು, ರಾಜ್ಯದ ಒಳನಾಡಿನಲ್ಲಿ ಕಳೆದೆರಡು ದಿನಗಳಿಂದ ವ್ಯಾಪಕ ಹಾಗೂ ಭಾರೀ ಮಳೆಯಾಗಿದ್ದು, ಇನ್ನು ಒಂದು ವಾರ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಿನ್ನೆ ಸಂಜೆ ಹಾಗೂ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಭಾರಿ ಮಳೆಯಾದ ವರದಿಯಾಗಿದೆ. ಬೆಂಗಳೂರಿನಲ್ಲೂ ಭಾರೀ ಮಳೆಯಾಗಿದ್ದು ಕೆಂಗೇರಿಯಲ್ಲಿ ದಾಖಲೆ ಪ್ರಮಾಣದ ಮಳೆಯಾದ ವರದಿಯಾಗಿದೆ.

ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕ ಕಾಲಕ್ಕೆ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.

ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು, ರಾಮನಗರ, ಬೆಂಗಳೂರು, ಗ್ರಾಮಾಂತರ, ಚಿತ್ರದುರ್ಗ ಸೇರಿದಂತೆ ಒಳನಾಡಿನ ಹಲವು ಜಿಲ್ಲೆ ಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಂಗೇರಿಯಲ್ಲಿ 186 ಮಿ.ಮೀ.ನಷ್ಟು ದಾಖಲೆ ಪ್ರಮಾಣ ಮಳೆಯಾಗಿದೆ.

ಹವಾ ಮುನ್ಸೂಚನೆ ಪ್ರಕಾರ ಜುಲೈ ಎರಡರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಮುಂಗಾರು ಕ್ರಿಯಾಶೀಲವಾಗಿದ್ದ, ಜೂನ್ 29ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಮುಂಗಾರು ಮಳೆ ಚೇತರಿಕೆಗೆ ಪೂರಕವಾದ ವಾತಾವರಣವಿದೆ ಎಂದು ಹೇಳಿದರು.

ಈಗಾಗಲೇ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಜಲಾನಯನ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಗಳ ಒಳಹರಿವಿನ ಪ್ರಮಾಣವೂ ಆಗುತ್ತಿದೆ.

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕಾಗಿವೆ. ರೈತರು ಮುಂಗಾರು ಹಂಗಾಮಿನ ಬಿತ್ತನೆಯ ಸಿದ್ಧತೆಯಲ್ಲಿ ತೊಡಗಿz್ದÁರೆ ಎಂದರು.

Facebook Comments