ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ ಸಾಧ್ಯತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.20- ಮುಂಗಾರು ಮಳೆ ಮತ್ತೆ ಚೇತರಿಕೆ ಕಂಡಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಹವಾ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮೇಲಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾದ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ತಿಳಿಸಿದರು.

ಎರಡು ಮೇಲ್ಮೈ ಸುಳಿಗಾಳಿಗಳು ಜೊತೆಗೂಡಿರುವುದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಹೆಚ್ಚಾಗಿದೆ. ಉಡುಪಿಯಲ್ಲಿ ಗರಿಷ್ಠ ನ 548 ಮಿ.ಮೀ.ನಷ್ಟು ದಾಖಲೆ ಪ್ರಮಾಣದ ಮಳೆಯಾದಂತಾಗಿದೆ ಎಂದರು.

ಉಡುಪಿ ಯಲ್ಲಿ ಸರಾಸರಿ 221 ಮಿ. ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ 316 ಮಿ.ಮೀ, ಸರಾಸರಿ 216 ಮಿ.ಮೀ, ಚಿಕ್ಕಮಗಳೂರು ಜಿಲ್ಲೆಯಲ್ಲಿ 258 ಮಿ.ಮೀ, ಶಿವಮೊಗ್ಗದಲ್ಲಿ 82‌ ಮಿ.ಮೀ, ಕುಂದಾಪುರದಲ್ಲಿ 222 ಮಿ. ಮೀ. ನಷ್ಟು ಗರಿಷ್ಠ ಪ್ರಮಾಣದ ಮಳೆಯಾದ ವರದಿಯಾಗಿದೆ.

ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದ್ದು, ಜಲಾಶಯಗಳ ಒಳಹರಿವು ಕೂಡ ಗಣನೀಯವಾಗಿ ಏರಿಕೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಕೂಡ ಸಾಧಾರಣ ಪ್ರಮಾಣದ ಮಳೆಯಾಗಿದೆ. ಕೆಲವೆಡೆ ಅಧಿಕ ಪ್ರಮಾಣದ ಮಳೆಯಾಗಿದೆ.

ಹವಾ ಮುನ್ಸೂಚನೆ ಪ್ರಕಾರ ಕರಾವಳಿ, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮಳೆಯಾಗಲಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin