ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.21- ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಒಳ ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಹವಾಮುನ್ಸೂಚನೆ ಪ್ರಕಾರ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಬುಧವಾರದಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನು ಎರಡು -ಮೂರು ದಿನದಲ್ಲಿ ಮತ್ತಷ್ಟು ಪ್ರಬಲವಾಗುವ ಸಾಧ್ಯತೆ ಇದೆ. ಏಕಕಾಲಕ್ಕೆ ಎರಡು ಕಡೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಬಯಲುಸೀಮೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ನಿನ್ನೆ ದಾವಣಗೆರೆ, ಚಿತ್ರದುರ್ಗ, ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರಿನ ಕೆಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ ಕೆಲವು ಕಡೆ ಭಾರೀ ಮಳೆಯಾಗಿದೆ ಎಂದರು. ಹವಾ ಮುನ್ಸೂಚನೆ ಪ್ರಕಾರ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ತಿಳಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ