ರಾಜ್ಯದಲ್ಲಿ ತಗ್ಗಿದ ಮುಂಗಾರು ತೀವ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.29-ನೈರುತ್ಯ ಮುಂಗಾರು ದುರ್ಬಲಗೊಳ್ಳುತ್ತಿದ್ದು, ರಾಜ್ಯದಲ್ಲಿ ಇನ್ನೊಂದು ವಾರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಕಳೆದೊಂದು ವಾರದಿಂದ ಕಲ್ಯಾಣ ಕರ್ನಾಟಕ ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದೆ.

ನಿನ್ನೆ ಸಂಜೆ ಹಾಗೂ ರಾತ್ರಿಯೂ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮತ್ತು ಸಾಧಾರಣ ಪ್ರಮಾಣದ ಮಳೆಯಾದ ವರದಿಯಾಗಿದೆ.

ವಾತಾವರಣದಲ್ಲಿ ಬದಲಾವಣೆಗಳಾಗುತ್ತಿದ್ದು, ಟ್ರಪ್ ನಿರ್ಮಾಣವಾಗಿರುವುದರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದೂ ಕೂಡ ಸಾಧಾರಣ ಮಳೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಮುಂಗಾರು ಮಳೆಯ ಆರ್ಭಟ ಮುಗಿಯುತ್ತಿದ್ದು, ಸದ್ಯಕ್ಕೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದರು.

ಅಕ್ಟೋಬರ್ 15ರ ವೇಳೆಗೆ ಮುಂಗಾರು ಮಾರುತಗಳ ಮರಳುವಿಕೆ ಪ್ರಾರಂಭವಾಗಲಿದ್ದು, ಆ ವೇಳೆಗೆ ಮತ್ತೊಂದು ಸುತ್ತಿನ ಮಳೆಯಾದರೂ ಆಗಬಹುದು.

ಕಳೆದೊಂದು ವಾರದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಅಕ ಪ್ರಮಾಣದ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಿತ್ತು. ಇನ್ನೊಂದು ವಾರ ರಾಜ್ಯಾದ್ಯಂತ ಮುಂಗಾರು ಮಳೆ ತೀವ್ರತೆ ಇಳಿಮುಖವಾಗುವ ಮುನ್ಸೂಚನೆಗಳಿವೆ ಎಂದು ಹೇಳಿದರು.

Facebook Comments

Sri Raghav

Admin