ರಾಜೀವ್ ಗಾಂಧಿ 75ನೇ ಜನ್ಮ ಜಯಂತಿ : ಪ್ರಧಾನಿ ಸೇರಿ ಗಣ್ಯಾತಿಗಣ್ಯರ ನಮನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.20- ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ 75ನೇ ಜನ್ಮ ಜಯಂತಿಯನ್ನು ಇಂದು ಕಾಂಗ್ರೆಸ್ ದೇಶಾದ್ಯಂತ ಸದ್ಭಾವನಾ ದಿನವನ್ನಾಗಿ ಆಚರಿಸುತ್ತಿದೆ. ರಾಜೀವ್ ಜನ್ಮ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ ಮೋದಿ, ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮಜಯಂತಿಗಾಗಿ ನಮನ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್‍ಮುಖರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾಧ್ರಾ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಪಕ್ಷದ ಮುಖಂಡರಾದ ಗುಲಾಂ ನಬಿ ಆಜಾದ್, ಅದೀರ್ ರಂಜನ್ ಚೌಧರಿ ಸೇರಿದಂತೆ ಅನೇಕರು ದೆಹಲಿಯ ವೀರಭೂಮಿಗೆ ತೆರಳಿ ರಾಜೀವ್ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ರಾಹುಲ್ ಗಾಂಧಿ ಟ್ವೀಟರ್‍ನಲ್ಲಿ ತಮ್ಮ ತಂದೆಯನ್ನು ಸ್ಮರಿಸುತ್ತಾ ಅವರ ಸಾಧನೆ ಮತ್ತು ಸೇವೆಯನ್ನು ಗುಣಗಾನ ಮಾಡಿದ್ದಾರೆ.  ಸಮಾಧಿ ಸ್ಥಳದಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಮೊದಲಾದವರು ಭಾಗವಹಿಸಿದ್ದರು.  ರಾಜೀವ್ ಜನ್ಮ ದಿನವನ್ನು ಕಾಂಗ್ರೆಸ್ ಸದ್ಭಾವನಾ ದಿನವನ್ನಾಗಿ ಆಚರಿಸುತ್ತಿದ್ದು, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ಸದ್ಭಾವನಾ ರ್ಯಾಲಿಗಳು ನಡೆಯುತ್ತಿವೆ.

ದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಇಂದು ಕಾಂಗ್ರೆಸ್ ವತಿಯಿಂದ ರಾಜೀವ್ ಸ್ಮರಣಾರ್ಥ ದೊಡ್ಡ ಕಾರ್ಯಕ್ರಮವನ್ನು ಆಯೋಜಿತವಾಗಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಷಣ ಮಾಡಿದರು.

Facebook Comments