3 ಸೇನಾ ಪಡೆಗಳ ಮುಖ್ಯಸ್ಥರೊಂದಿಗೆ ರಕ್ಷಣಾ ಸಚಿವರ ಮಹತ್ವದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.16- ಇಂಡೋ-ಚೀನಾ ಗಡಿ ಭಾಗದ ಲಡಾಕ್‍ನಲ್ಲಿ ನಿನ್ನೆ ರಾತ್ರಿ ಉಭಯ ದೇಶಗಳ ಸೇನಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದು ಸಾವು-ನೋವು ಸಂಭವಿಸಿರುವ ಹಿನ್ನೆಲೆ ಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು ಮಧ್ಯಾಹ್ನ ಉನ್ನತ ತುರ್ತು ಸಭೆ ನಡೆಸಿದರು.

ಭಾರತೀಯ ಮೂರು ಸಶಸ್ತ್ರ ಪಡೆಗಳ ಮಹಾ ದಂಡನಾಯಕ ಜನರಲ್ ಬಿಪಿನ್ ರಾವತ್, ಭೂ ಸೇನೆ , ವಾಯು ದಳ ಮತ್ತು ನೌಕಾ ಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಗಡಿಯಲ್ಲಿನ ಪರಿಸ್ಥಿತಿಯನ್ನು ಪರಾಮರ್ಶಿಸಿದರು.

ಪೂರ್ವ ಲಡಾಕ್‍ನ ಗಲ್ವನ್ ಪ್ರದೇಶದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಗಹನ ಚರ್ಚೆ ನಡೆಸಲಾಗಿದೆ.

ಶಾಂತಿ ಸಂಧಾನದ ಭರವಸೆ ನೀಡುತ್ತಲೇ ನರಿ ಬುದ್ಧಿ ಪ್ರದರ್ಶಿಸಿರುವ ಚೀನಾ ವರ್ತನೆ ಬಗ್ಗೆ ರಾಜನಾಥ ಸಿಂಗ್ ಮತ್ತು ಸೇನಾ ಮುಖ್ಯಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂತಹ ಬಿಗುವಿನ ಪರಿಸ್ಥಿತಿಯಲ್ಲೂ ಚೀನಾ ಗಡಿಯಲ್ಲಿ ಸಂಯಮ ಕಾಯ್ದುಕೊಳ್ಳದೆ ಅಪ್ರಚೋ ದಿತ ದಾಳಿ ನಡೆಸಿ ಮೂವರು ಯೋಧರನ್ನು ಕೊಂದಿ ರುವ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Facebook Comments