ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು , ಸೆ. 05: ಭಾರತದ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಅವರು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಿದ್ದು, ಹೆಚ್‌ಎ‌ಎಲ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ಹಾಗೂ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಅವರು ರಕ್ಷಣಾ ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಕೇಂದ್ರ ರಕ್ಷಣಾ ಸಚಿವರು ರಾಜಭವನಕ್ಕೆ ಭೇಟಿ ನೀಡಿ ನಂತರ ಕೇಂದ್ರ ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಪುತ್ರಿಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Facebook Comments

Sri Raghav

Admin