ಸೂಪರ್ ಸ್ಟಾರ್ ರಜನಿಕಾಂತ್‍ @ 71

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಡಿ.12- ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ತಮ್ಮ 71ನೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಹಲವು ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ತಲೈವಾಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿರುವ ರಜನಿಕಾಂತ್‍ರ ಜನ್ಮದಿನವನ್ನು ಅಭಿಮಾನಿಗಳು ತಮಿಳುನಾಡಿನೆಲ್ಲೆಡೆ ಆಚರಿಸುತ್ತಿದ್ದು, ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ.

ಸ್ಟಾರ್ ನಟರ ಜನ್ಮ ದಿನದಂದು ಹೊಸ ಚಿತ್ರಗಳ ಘೋಷಣೆ, ಪೆÇೀಸ್ಟರ್, ಟೀಸರ್‍ಗಳ ಅನಾವರಣ ಮಾಡುವುದು ಸರ್ವೇ ಸಾಮಾನ್ಯ ಆದರೆ ಕಳೆದ ತಿಂಗಳಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಜನಿಕಾಂತ್‍ರ ಯಾವುದೇ ಹೊಸ ಚಿತ್ರಗಳು ಇಂದು ಘೋಷಣೆ ಆಗದ ಕಾರಣ ಅಭಿಮಾನಿಗಳು ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ನೆಚ್ಚಿನ ನಟನ ಹಳೆಯ ಚಿತ್ರಗಳ ಫೋಟೋಗಳು ಹಾಗೂ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಗೊಂಡಿರುವ ಸೂಪರ್‍ಸ್ಟಾರ್ ರಜನಿಕಾಂತ್ ಅಭಿನಯದ ಅಣ್ಣಾತೈ ಚಿತ್ರವು ಉತ್ತಮ ಪ್ರದರ್ಶನ ಕಾಣುತ್ತಿದ್ದು ಕಲೆಕ್ಷನ್‍ನಲ್ಲೂ ದಾಖಲೆ ಬರೆದಿರುವ ಈ ಚಿತ್ರ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರದ ಮುಂದೆ ರಜನಿ ಅಭಿಮಾನಿಗಳು ಪ್ರೇಕ್ಷಕರಿಗೆ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

Facebook Comments

Sri Raghav

Admin